ಸಿಎಂ ಕುಮಾರಸ್ವಾಮಿ ಕ್ಲರ್ಕ್ ಎಂದು ಟೀಕಿಸಿದ ಪ್ರಧಾನಿ ಮೋದಿ


ಹೊಸದಿಲ್ಲಿ: ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಸಿಎಂ ಕುಮಾರಸ್ವಾಮಿ ಕ್ಲರ್ಕ್ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. 

ಇಲ್ಲಿನ ರಾಮಲೀಲಾ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಮಾರೋಪದಲ್ಲಿ ಮಾತನಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ದೋಸ್ತಿ ಮಾಡಿಕೊಂಡಿರುವ ಜೆಡಿಎಸ್​ ಮುಖ್ಯಮಂತ್ರಿಯನ್ನು ಕ್ಲರ್ಕ್​ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಎಂದರು.

ಕರ್ನಾಟಕದಲ್ಲಿ ದೋಸ್ತಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಕಾಂಗ್ರೆಸ್ ಈಗಾಗಲೇ ಮುಖ್ಯಮಂತ್ರಿಯನ್ನು ಕ್ಲರ್ಕ್ ನಂತೆ ನೋಡುತ್ತಿದ್ದಾರೆ ಎಂದು ಟೀಕಿಸಿದರು. 

Leave a Reply

Your email address will not be published.