ಸಿಎಂ ಕ್ಲರ್ಕ್, ಪ್ರಧಾನಿ ಮೋದಿ ಹೇಳಿಕೆ: ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಿದ್ದು ಹೀಗೆ..!


ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನವರು ಸಿಎಂ ಕುಮಾರಸ್ವಾಮಿ ಅವರನ್ನು ಕ್ಲರ್ಕ್ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂದ  ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್ ನಾಯಕರು ಗರಂ ಆಗಿದ್ದು, ಪ್ರಧಾನಿ ಮೋದಿ ವಿರುದ್ದ  ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ತಮ್ಮ ಸ್ಥಾನದ ಘನತೆ ಅರಿತು ಮಾತನಾಡಿದೆ ಒಳ್ಳೆಯದು. ಮಾಹಾಘಟಬಂಧನ ಕಳ್ಳರ ಸಂತೆ ಆದರೆ ಎನ್ ಡಿಎ ಘಟಬಂಧನ ಕಳ್ಳರ ಸಂತೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಬಗ್ಗೆ ಪ್ರಧಾನಿ ಮೋದಿ ಹಗುರವಾಗಿ ಮಾತನಾಡಬಾರದು. ಮುಖ್ಯಮಂತ್ರಿಯಾಗಿ ಅವರ ಕೆಲಸ ಅವರು ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಮೋದಿಗೆ ಭಯವಾಗಿದೆ. ಹತಾಶೆಯಿಂದ ಈ ರೀತಿ ಹೇಳುತ್ತಿದ್ದಾರೆ. ಮೊದಲು ಅವರ ತಟ್ಟೆಯಲ್ಲಿ ಬಿದ್ದ ಹೆಗ್ಗಣ ತಗೆದುಕೊಳ್ಳಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published.