ಅಶ್ವಾರೂಢ ಶಿವಾಜಿ ಮೂರ್ತಿ ಅನಾವರಣಕ್ಕೆ ಕಡೋಲಿ ಗ್ರಾಮ ಸಜ್ಜು !


ಬೆಳಗಾವಿ: ತಾಲೂಕಿನ ಕಡೋಲಿ ಗ್ರಾಮ ಪಂಚಾಯ್ತಿ ಕಾರ್ಯಾಲಯದ ಎದುರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಅಶ್ವಾರೂಢ ಶಿವಾಜಿ ಮಹಾರಾಜರ ಮೂರ್ತಿ 12 ರಂದು ಅನಾವರಣಗೊಳ್ಳಲಿದ್ದು,  ಕಾರ್ಯಕ್ರಮಕ್ಕೆ ಸರ್ವ ಸಿದ್ದತೆ ಮಾಡಿಕೊಳ್ಳಲಾಗಿದೆ.

ರಾಜಮಾತಾ ಜೀಜಾವು ಜಯಂತಿ ನಿಮಿತ್ತ ಜ. 12 ರಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿಯೂ ಆಗಿರುವ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಮುಂದಾಳತ್ವದಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ.

Leave a Reply

Your email address will not be published.