ಹಾಡ ಹಗಲೆ ವ್ಯಕ್ತಿಯೋರ್ವನ ಕೊಲೆ


ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದ ಮುಂಬಾಗದ ಕಮಲ್ ಹೋಟೆಲ್ ಬಳಿ ಇಂದು ಬೆಳಗ್ಗೆ 9.30ರ ಸಮಯದಲ್ಲಿ ವ್ಯಕ್ತಿಯೋರ್ವನನ್ನು ಅಟ್ಟಾಡಿಸಿಕೊಂಡು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

 
ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದ ಇಪ್ಪತ್ತೊಂಬತ್ತು ವರ್ಷದ ಮಲ್ಲಿಕಾರ್ಜುನ ಕೊಲೆಯಾದ ದುರ್ದೈವಿ. ಮಲ್ಲಿಕಾರ್ಜುನ ನಗರದ ಕಾವೇರಿ ಲಾಡ್ಜ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಇಂದು ಮುಂಜಾನೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
 
ಕೊಲೆಗೆ ಕಾರಣವೇನು ಅನ್ನೋದು ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಎಸ್ಪಿ ಎನ್ ಶಶಿಕುಮಾರ್ ಹೆಚ್ಚುವರಿ ಎಸ್ಪಿ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.