ಬಜೆಟ್ ಅಧಿವೇಶನಕ್ಕೂ ಮುನ್ನ ಮೋದಿ ಏನು ಹೇಳಿದ್ರು ಗೊತ್ತಾ ?!


ಹೊಸದಿಲ್ಲಿ:ಎಲ್ಲಾ ಮಹತ್ವದ ವಿಷಯಗಳ ಮೇಲೆ ಚರ್ಚೆ ನಡೆಸಲು ತಮ್ಮ ಸರಕಾರ ಉತ್ಸುಕವಾಗಿದ್ದು, ಎಲ್ಲ ಸಂಸದರು ಅರ್ಥಪೂರ್ಣ ಚರ್ಚೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂಬ ವಿಶ್ವಾಸವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ.

ತಮ್ಮ ಸರಕಾರದ ಕಡೆಯ ಬಜೆಟ್ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮೋದಿ, ಸಂಸತ್ತಿನ ಪ್ರತಿಯೊಂದು ಕಲಾಪಗಳನ್ನೂ ದೇಶದ ಜನತೆ ಸೂಕ್ಷ್ಮವಾಗಿ ನೋಡುತ್ತಿದ್ದಾರೆ. ಹಾಗಾಗಿ ಸಂಸದರು ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪ್ರತಿಪಕ್ಷ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಮೋದಿ, ಸರಿಯಾರಿ ಚರ್ಚೆಯಲ್ಲಿ ಪಾಲ್ಗೊಳ್ಳದವರನ್ನು ಜನತೆ ಮೆಚ್ಚುವುದಿಲ್ಲ ಎಂದು ಹೇಳಿದರು.

 

Leave a Reply

Your email address will not be published.