ಕ್ರಿಯಾ ಸಮಾಧಿಯಲ್ಲಿ ವಿಲೀನರಾದ ಶತಮಾನದ ಸ್ವಾಮೀಜಿ !


ತುಮಕೂರು:  ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತಾದಿಗಳನ್ನು ಸಂಪಾದಿಸಿರುವ ಕರ್ನಾಟಕ ರತ್ನ, ತ್ರಿವಿಧ ದಾಸೋಹ ಮೂರ್ತಿ ಡಾ. ಶಿವಕುಮಾರ್ ಸ್ವಾಮೀಜಿ ಅವರ ಪವಿತ್ರ ಪಾರ್ಥಿವ ಶರೀರ ಸಕಲ ವಿಧಿವಿಧಾನ, ಸರಕಾರಿ ಗೌರವಗಳೊಂದಿಗೆ ಕ್ರಿಯಾ ಸಮಾಧಿಯಲ್ಲಿ ಲೀನವಾಯಿತು.

ಶ್ರೀಗಳ ಅಂತ್ಯಕ್ರಿಯೆಗೆ ಹತ್ತು ಲಕ್ಷಕ್ಕೂ ಹೆಚ್ಚು ಭಕ್ತರು, ಅಭಿಮಾನಿಗಳು ಸಾಕ್ಷಿಯಾಗಿದ್ದು, ಕರ್ನಾಟಕದಲ್ಲಿ ಹೊಸ ಇತಿಹಾಸವನ್ನೇ ಬರೆಯಿತು.

ಗೋಸಲ ಸಿದ್ದೇಶ್ವರ್ ವೇದಿಕೆಯಲ್ಲಿ ಲಕ್ಷಾಂತರ ಭಕ್ತರು   ಡಾ. ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದ ಬಳಿಕ ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಲಿಂಗಶರೀರ ಮೆರವಣಿಗೆ ಮಾಡಲಾಯಿತು.

ಶ್ರೀಗಳ ಲಿಂಗಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ಮೂರು ಸುತ್ತು ಕುಶಾಲ ತೋಪು ಹಾರಿಸಿ ಸಕಲ ಸರಕಾರಿ ಗೌರವ ಸಲ್ಲಿಸಲಾಯಿತು.

ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಡಿ.ಕೆ.ಶಿವಕುಮಾರ್, ಸಾರಾ ಮಹೇಶ್, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಯೋಗಗುರು ರಾಮದೇವ ಬಾಬಾ, ನಿರ್ಮಲಾನಂದ ಸ್ವಾಮೀಜಿ, ಸುತ್ತೂರು ಶ್ರೀಗಳು ಸೇರಿದಂತೆ ರಾಜ್ಯದ ನಾನಾ ಭಾಗದ ಮಠಾಧೀಶರು, ಭಕ್ತಾದಿಗಳು ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.

Leave a Reply

Your email address will not be published.