ಎಸ್.ಸಿ/ಎಸ್.ಟಿ ತಿದ್ದುಪಡಿ ಮಸೂದೆ ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ಫೆ. 19 ಕ್ಕೆ


ಹೊಸದಿಲ್ಲಿ: ಜಾತಿನಿಂದನೆ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಎಸ್.ಸಿ./ಎಸ್ .ಟಿ ಕಾಯ್ದೆ ತಿದ್ದುಪಡಿ ಮಸೂದೆ ವಿರೋಧಿಸಿ ಸಲ್ಲಿಸಲಾಗಿರುವ  ಅರ್ಜಿಗಳ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಫೆಬ್ರುವರಿ 19 ಕ್ಕೆ ನಿಗದಿಪಡಿಸಿರುವುದಾಗಿ ಬುಧಾವರ ಹೇಳಿದೆ.

ಸಂಸತ್ತಿನಲ್ಲಿ ಅಂಗೀಕರಿಸಲಾಗಿರುವ ಎಸ್ ಸಿ/ಎಸ್ ಟಿ ತಿದ್ದುಪಡಿ ಮಸೂದೆ ಜಾರಿಗೊಳಿಸುವುದಕ್ಕೆ ತಡೆಯಾಜ್ಞೆ ನೀಡಲು ನ್ಯಾಯಮೂರ್ತಿ ಯು.ಯು. ಲಲಿತ್ ಮತ್ತು ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಅವರನ್ನು ಒಳಗೊಂಡಿರುವ ಪೀಠ ನಿರಾಕರಿಸಿತು.

ಆಪಾದನೆ ಬಂದಾಕ್ಷಣ ಬಂಧಿಸದೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡಬೇಕು ಎಂದು ಮಾರ್ಚ 2018 ರಲ್ಲಿ  ತೀರ್ಪು ನೀಡಿದ  ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಲಲಿತ್ ಕೂಡ ಇದ್ದರು.

 

Leave a Reply

Your email address will not be published.