ಸಿಲಿಂಡರ್ ಸ್ಪೋಟದಿಂದ‌ ಹೊತ್ತಿ‌ ಉರಿದ‌ ಕಟ್ಟಡ: ಹಲವರು ಆಸ್ಪತ್ರೆಗೆ


 


ಬೆಳಗಾವಿ: ಸಿಲಿಂಡರ್ ಸ್ಫೋಟಗೊಂಡು ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಹೊತ್ತಿದ ಘಟನೆ ನಗರದ ಕಾಕತಿವೇಸ್ ಬಳಿ ಶುಕ್ರವಾರ ಸಂಜೆ ನಡೆದಿದೆ.

ಮಾಡಿವಾಲೆ ಎಂಬುವವರಿಗೆ ಸೇರಿದ ವಾಣಿಜ್ಯ ಕಟ್ಟಡ ಇದಾಗಿದ್ದು, ಮೆಡಿಕಲ್‌ ಶಾಪ್‌ ಸೇರಿದಂತೆ ಇನ್ನಿತರ ಅಂಗಡಿಗಳಿವೆ.

ಸಿಲಿಂಡರ್​ಗಳು ಸ್ಫೋಟಗೊಂಡಿದ್ದರಿಂದ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿದೆ.ಕಟ್ಟಡದಿಂದ ಹೊರಬರುತ್ತಿರುವ ದಟ್ಟ ಹೊಗೆಗೆ ಸ್ಥಳೀಯರು ಆತಂಕಗೊಂಡಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ದಟ್ಟ ಹೊಗೆಯಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಾಲ್ವರನ್ನು ಆಸ್ಪತ್ರೆಗೆ ‌ಸೇರಿಸಲಾಗಿದೆ. ಇನ್ನು ಹಲವರು‌ ಕಟ್ಟದಲ್ಲಿ ಇರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಕಮಿಷನರ್ ಡಿ.ಸಿ ರಾಜಪ್ಪ ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

ಖಡೇಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published.