ಆಪರೇಷನ್ ಕಮಲ: ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಹಾನಿ ಮಾಡಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್


ಹೊಸದಿಲ್ಲಿ: ಆಫರೇಷನ್ ಕಮಲ ಆಡಿಯೋ ಪ್ರಕರಣ ರಾಷ್ಟ್ರಮಟ್ಟದಲ್ಲೇ ಸದ್ದು ಮಾಡುತ್ತಿದ್ದು ಈಗ ಕಾಂಗ್ರೆಸ್ ನಾಯಕರು ಈ ಕುರಿತು ರಾಷ್ಟ್ರಪತಿಗೆ ದೂರು ನೀಡಲು ಸಜ್ಜಾಗುತ್ತಿದ್ದಾರೆ. 

ಸಿಎಂ ಕುಮಾರಸ್ವಾಮಿ ಜೆಡಿಎಸ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಪರೇಷನ್ ಕಮಲದ ಕುರಿತು ಮಾತನಾಡಿರುವ ಧ್ವನಿ ಸುರುಳಿಯನ್ನು ಬಿಡುಗಡೆಗೊಳಿಸಿದ್ದು ರಾಜ್ಯ ವಿಧಾನಸಭೆ ಮತ್ತು ಸಂಸತ್ತಿನಲ್ಲೂ ಕೋಲಾಹಲ ಸೃಷ್ಟಿ ಮಾಡಿದೆ. 

ನಿನ್ನೆ ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿ ಕಲಾಪದಲ್ಲೂ ಆಪರೇಷನ ಕಮಲ ವಿರುದ್ಧ ಧ್ವನಿ ಎತ್ತಿದ್ದರು.  ಈಗ  ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಮತ್ತಷ್ಟು ಹಾನಿ ಮಾಡಲು ಕಾಂಗ್ರೆಸ್ ಸಜ್ಜಾಗುತ್ತಿದ್ದು ರಾಷ್ಟ್ರಪತಿ ರಾಮನಾಥ ಕೋವಿಂದಗೆ ದೂರು ನೀಡಲು ಕಾಂಗ್ರೆಸ್ ಹೈಕಮಾಂಡಿನ ಸೂಚನೆಗಾಗಿ ಕಾಯುತ್ತಿದೆ. 

Leave a Reply

Your email address will not be published.