ದೇವೇಗೌಡ ಮುಂದಿನ ಪ್ರಧಾನಿ ಅಭ್ಯರ್ಥಿ ??!!


ಮಂಡ್ಯ:  ಮಾಜಿ ಪ್ರಧಾನಿ ಎಚ್ .ಡಿ. ದೇವೇಗೌಡ ಅವರು ಪ್ರಧಾನಿ ಹುದ್ದೆಯ ರೇಸ್ ನಲ್ಲಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

1996 ರಲ್ಲಿ ಕೇವಲ 16 ಸ್ಥಾನಗಳಲ್ಲಿ ಗೆದ್ದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರು ಪ್ರಧಾನಿ ಹುದ್ದೆಗೆ ಏರಿದ್ದರು. ಈ ಬಾರಿ ಜೆಡಿಎಸ್ -ಕಾಂಗ್ರೆಸ್ ದೋಸ್ತಿಗೆ 20 ರಿಂದ 22 ಸ್ಥಾನಗಳನ್ನು ಗೆಲ್ಲಿಸಿಕೊಟ್ಟರೆ ಮತ್ತೊಮ್ಮೆ ಕನ್ನಡಿಗರೊಬ್ಬರು ಪ್ರಧಾನಿ ಹುದ್ದೆ ಅಲಂಕರಿಸಲು ಅವಕಾಶವಿದೆ ಎಂದು ಕುಮಾರಸ್ವಾಮಿ ಇಲ್ಲಿ ಹೇಳಿಕೆ ನೀಡಿದ್ದಾರೆ.

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸುಮಲತಾಗೆ ತಮ್ಮ ಪಕ್ಷದ ಟಿಕೆಟ್ ನೀಡುವುದಿಲ್ಲ ಎಂದೂ ಅವರು ಸ್ಪಷ್ಟವಾಗಿ ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ 5000 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ  ಈ ರಾಜಕೀಯ ಭಾಷಣ  ಮಾಡಿದ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಪುತ್ರ ನಿಖಿಲ್ ಜೆಡಿಎಸ್ ಅಭ್ಯರ್ಥಿಯಾಗಲಿದ್ದು ಆಶೀರ್ವದಿಸಬೇಕೆಂದು ಕೋರಿದ್ದೂ ಗಮನ ಸೆಳೆಯಿತು.

Leave a Reply

Your email address will not be published.