ವಿಟಿಯು ವಿಭಜನೆ ಕೈಬಿಡಲು ಸಿಎಂ ನಿರ್ಧಾರ: ಸತೀಶ ಜಾರಕಿಹೊಳಿ


ಬೆಳಗಾವಿ : ಇಲ್ಲಿಯ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಭಜನೆ ನಿರ್ಧಾರ ಕೈ ಬಿಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಉದಯನಾಡು ಜತೆಗೆ ಮಾತನಾಡಿದ  ಸಚಿವರು, ಕೆಲವು ತಪ್ಪು ಮಾಹಿತಿಯಿಂದಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಭಜಿಸುವ ನಿರ್ಧಾರಕ್ಕೆ ಬರಲಾಗಿತ್ತು. ಆದರೆ ಈ ಸಂಬಂಧ ಪ್ರತಿಭಟನೆಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಈ ನಿರ್ಧಾರವನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಸಿಎಂ ತಿಳಿಸಿದ್ದಾರೆ ಎಂದರು.

ಸಚಿವರುಗಳಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಮನಗೂಳಿ, ಆರ್.ಬಿ.ತಿಮ್ಮಾಪುರ ಹಾಗೂ ಹಲವಾರು ಶಾಸಕರು ಸೇರಿ ಮುಖ್ಯಮಂತ್ರಿಯನ್ನು ಮಂಗಳವಾರ ರಾತ್ರಿ ಭೇಟಿಯಾಗಿದ್ದೆವು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ವಿಭಜನೆ ಕೈಬಿಡುವುದಾಗಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಈ ಸಬಂಧ ಪ್ರತಿಭಟನೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಮುಖ್ಯಮಂತ್ರಿಗಳು 4-5 ಮಂತ್ರಿಗಳು ಮತ್ತು ಶಾಸಕರ ಸಮ್ಮುಖದಲ್ಲಿ ಸ್ಪಷ್ಟ ಭರವೆಸ ನೀಡಿರುವುದರಿಂದ  ಪ್ರತಿಭಟನೆ ಮುಂದುವರಿಸುವ ಅವಶ್ಯಕತೆ ಇಲ್ಲ ಎಂದು ಜಾರಕಿಹೊಳಿ ಹೇಳಿದರು.

Leave a Reply

Your email address will not be published.