ಕಾಂಗ್ರೆಸ್ ಭಿನ್ನಮತ ಶಮನಗೊಂಡಿದೆ, ರಮೇಶಗೆ ಮಂತ್ರಿ ಸ್ಥಾನ ಹೈಕಮಾಂಡ್ ಗೆ ಬಿಟ್ಟಿದ್ದು: ಸತೀಶ ಜಾರಕಿಹೊಳಿ


ಬೆಳಗಾವಿ ಸ್ಮಾರ್ಟ್ ಸಿಟಿ ವಿವಿಧ ಕಾಮಗಾರಿಗಳಿಗೆ ಚಾಲನೆ

ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಶಮನಗೊಂಡಿದೆ. ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಇಂದು ಸಿಬಿಟಿ ಬಸ್ ನಿಲ್ಧಾಣದ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅನೇಕ ಜನ ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡಲು ನಿರ್ಧರಿಸಿದೆ. ಟಿಕೆಟ್ ಯಾರಿಗೆ ಅನ್ನೋದನ್ನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು

ಅಭಿವೃದ್ಧಿ  ಪರ್ವ…

ಬೆಳಗಾವಿ ನಗರ ಬಸ್ ನಿಲ್ಧಾಣಕ್ಕೆ 32 ಕೋಟಿ ರೂ.,  ಬೆಳಗಾವಿ ಉತ್ತರ ,ದಕ್ಷಿಣ ಮತಕ್ಷೇತ್ರಗಳಲ್ಲಿ ಸ್ಮಾರ್ಟ್ ರಸ್ತೆ,ಗಳ ನಿರ್ಮಾಣ, ಸೈಕಲ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ಒಟ್ಟು 264 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಸಚಿವರು, ಬೆಳಗಾವಿ ದಕ್ಷಿಣ ಮತ್ತು ಉತ್ತರ ಮತಕ್ಷೇತ್ರಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಚಾಲನೆ ಕೊಡಲಾಗಿದ್ದು, ಹಂತ ಹಂತವಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು   ಹೇಳಿದರು.

ಶಾಸಕ ಮಹಾಂತೇಶ ಕವಟಗಿಮಠ, ಮಹೇಶ ಕುಮಠಳ್ಳಿ, ಸಂಸದ ಸುರೇಶ ಅಂಗಡಿ, ಅನಿಲ ಬೆನಕೆ, ಮೇಯರ್ ಬಸವರಾಜ ಚಿಕ್ಕಲದಿನ್ನಿ, ಜಿಯಾವುಲ್ಲಾ, ಇನ್ನೂ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

 

Leave a Reply

Your email address will not be published.