ಬಿಎಸ್ ವೈ ಭೇಟಿಯಾದ ಎ. ಮಂಜು: ಪ್ರಜ್ವಲ್ ವಿರುದ್ದ ಬಿಜೆಪಿಯಿಂದ ಕಣಕ್ಕೆ?


ಬೆಂಗಳೂರು: ಕಾಂಗ್ರೆಸ್ ನ ಮಾಜಿ ಸಚಿವ ಎ. ಮಂಜು ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಎ. ಮಂಜು ಬಿಜೆಪಿಗೆ ಸೇರಲಿದ್ದಾರೆ ಎಂಬ ವದಂತಿಗೆ ಇಂಬು ನೀಡುವಂತಿದೆ.

ಹಾಸನ ಲೋಕಸಭಾ ಕ್ಷೇತ್ರದಿಂದ ದೇವೇಗೌಡರು ಸ್ಪರ್ಧಿಸಿದರೆ ಮಾತ್ರ ಬೆಂಬಲ ನೀಡುವುದಾಗಿ ಹೇಳಿದ್ದ ಎ.ಮಂಜು ದೇವೇಗೌಡರ ಹೊರತು ಬೇರೆ ಯಾರೇ ಸ್ಪರ್ಧಿಸಿದ್ದರು ನನ್ನ ಬೆಂಬಲ ಇಲ್ಲ ಎಂದು ಬಹಿರಂಗ ಹೇಳಿಕೆ ನೀಡಿದ್ದರು.

ಹಾಸನ ಕ್ಷೇತ್ರದಿಂದ ಜೆಡಿಎಸ್- ಕಾಂಗ್ರೆಸ್ ಅಭ್ಯರ್ಥಿಯಾಗಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಕಣಕ್ಕಿಳಿಯಲಿದ್ದು, ಈ ಹಿನ್ನಲೆ ಎ. ಮಂಜು ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ.

ಈ ಹಿಂದೆ ಬಿಜೆಪಿಯಲ್ಲಿದ್ದ ಎ. ಮಂಜು ಕಾಂಗ್ರೆಸ್ ಸೇರಿದ್ದರು. ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಇವರು ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪರಾವಗೊಂಡಿದ್ದರು.  ಈಗ ಮತ್ತೆ ಮಾತೃ ಪಕ್ಷ ಬಿಜೆಪಿ ಮರಳಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆಯೂ ಎ. ಮಂಜು ಬಿಎಸ್ ವೈ ಅವರನ್ನು ಎರಡು ಬಾರಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬಿಜೆಪಿಗೆ ಸೇರುವುದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ.

Leave a Reply

Your email address will not be published.