ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಬಿಎಸ್ ಪಿ ಸ್ಪರ್ಧೆ


ಮೈಸೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡಲು ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ನಿರ್ಧರಿಸಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್‌ಪಿ ಮುಖಂಡ ಸುಧಾಕರ್ ಕಂಬಿ, ಬಹುಜನ ಸಮಾಜ ಪಕ್ಷದ ವತಿಯಿಂದ ವಿಜಯಪುರ ಸೇರಿದಂತೆ ರಾಜ್ಯದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದರು.

28 ಲೋಕಸಭೆ ಕ್ಷೇತ್ರಗಳ ಪೈಕಿ 2 ರಿಂದ 3 ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ನಿಶ್ವಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಸಮಾಜವಾದಿ (ಎಸ್‌ಪಿ) ಪಕ್ಷ ಮೈತ್ರಿ ಮಾಡಿಕೊಂಡಿದ್ದು, 60ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು ದಾಖಲಿಸಲಿದೆ. ಈ ಮೂಲಕ ಮಾಯವತಿ ಪ್ರಧಾನಿಯಾಗಲಿದ್ದಾರೆ ಎಂದು ಸುಧಾಕರ್ ಕಂಬಿ ಹೇಳಿಕೊಂಡರು.

Leave a Reply

Your email address will not be published.