ಮಾ. 18 ರಂದು ಅಭ್ಯರ್ಥಿಗಳ ಹೆಸರು ಘೋಷಣೆ: ಬಿಎಸ್ ವೈ


ಚಿಕ್ಕಮಗಳೂರು:  ಲೋಕಸಭಾ ಚುನಾವಣೆ ರಾಜ್ಯದಲ್ಲಿ  22 ಕ್ಕೂ ಹೆಚ್ಚು ಸೀಟು ಗೆದ್ದು, ಮೋದಿ ಅವರನ್ನು ಮತ್ತೆ ಪ್ರಾಧಾನಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುನರುಚ್ಚರಿಸಿದರು.

ಶೃಂಗೇರಿಯಲ್ಲಿ ಶಾರದಾಂಬೆ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ದೇಶಾದ್ಯಂತ ಮೋದಿ ಅಲೆ ಇದೆ. 300 ಕ್ಕೂ ಹೆಚ್ಚು ಸೀಟು ಗೆದ್ದು ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ ಚಂದ್ರ ಎಷ್ಟು ಸತ್ಯವೋ, ಮೋದಿ ಪ್ರಧಾನಿಯಾಗುವುದು ಅಷ್ಟೇ ಸತ್ಯ ಎಂದರು.

18 ತಾರೀಖು ಅಭ್ಯರ್ಥಿಗಳ ಹೆಸರು ಘೋಷಣೆ:

ಮಾ. 17 ರಂದು ಕೋರ್ ಕಮಿಟಿ ಸಭೆ ಇದೆ. ಮಾ. 18 ರಂದು  ಅಭ್ಯರ್ಥಿಗಳ ಹೆಸರನ್ನು ಘೋಷಿಸಿಲಾಗುವುದು. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಇನ್ನು ನಿರ್ಧರಿಸಿಲ್ಲ. ಸುಮಲತಾ ಅವರ ನಿರ್ಧಾರ ನೋಡಿ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ. ಕಾಂಗ್ರೆಸ್ ಜೆಡಿಎಸ್ ದೋಸ್ತಿ ವಿಚಾರವಾಗಿ ಪ್ರತಿಕ್ರಿಯಿಸಿ,  ಇದು ಮುಖಂಡರ ದೋಸ್ತಿ, ಕಾರ್ಯಕರ್ತರದ್ದಲ್ಲ. ಎಲ್ಲೇ ಹೋದರು ಕಚ್ಚಾಟ, ಕಿತ್ತಾಟ ಕಾಮನ್ ಆಗಿದೆ ಎಂದು ದೂರಿದರು,

Leave a Reply

Your email address will not be published.