ಮಧು ಬಂಗಾರಪ್ಪ ಗೆಲುವಿಗೆ ಹೆಚ್ಚಿನ ಶ್ರಮ: ದೇವೇಗೌಡ

ಶಿವಮೊಗ್ಗ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ದೋಸ್ತಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯಲಿದ್ದಾರೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಘೋಷಿಸಿದ್ದಾರೆ.

ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಮೊಮ್ಮಕಳ್ಳನ್ನು ಗೆಲ್ಲಿಸಲು ಪ್ರಯತ್ನಿಸುವ ರೀತಿಯಲ್ಲಿಯೇ ಮಧು ಬಂಗಾರಪ್ಪ ಗೆಲ್ಲಿಸಲು ಪ್ರಯತ್ನ ಮಾಡುತ್ತೇವೆ ಎಂದು ಅವರು ಹೇಳಿದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.ಇಂದು ಬೆಳಗ್ಗೆ ದೇಶಪಾಂಡೆಯವರು ಬಂದು ನನ್ನ ಬಳಿ ಮಾತನಾಡಿದ್ದಾರೆ. ಆದರ ಇನ್ನು ಯಾವುದೇ ತೀರ್ಮಾನವಾಗಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರು ಬಂದು‌ ಮಧು ಬಂಗಾರಪ್ಪ ಪರ ಪ್ರಚಾರ ಮಾಡಲಿದ್ದಾರೆ ಎಂದರು.

ಕೊನೆಗೂ ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ಬಗ್ಗೆ ಗುಟ್ಟನ್ನು ದೇವೇಗೌಡರು ಬಿಟ್ಟುಕೊಡಲಿಲ್ಲ.

Leave a Reply

Your email address will not be published.