ಅಪಘಾತ ತಡೆಗೆ ಸೈನ್ ಬೋರ್ಡ್ ಅಳವಡಿಕೆಗೆ ಜಿಲ್ಲಾಧಿಕಾರಿ ಸೂಚನೆ


ಕೊಪ್ಪಳ : ರಸ್ತೆ ಸುಕ್ಷತೆ ಕಾಪಾಡಿ ಅಫಘಾತ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಅಗತ್ಯವಿರುವ ಕಡೆ ರಸ್ತೆ ಸುರಕ್ಷತಾ ಸೂಚನಾ ಫಲಕಗಳನ್ನು ಅಳವಡಿಸಲು ಸಮಿತಿಯಿಂದ ಪೊಲೀಸ್ ಇಲಾಖೆಗೆ ರೂ.3 ಲಕ್ಷಗಳನ್ನು ನೀಡಲಾಗುತ್ತಿದೆ ಎಂದು ಕೊಪ್ಪಳ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದರು.

ಸಾರಿಗೆ ಇಲಾಖೆಯ ವತಿಯಿಂದ ಜಿಲ್ಲಾಡಳಿತ ಭವನದ ಕೆ.ಎಸ್.ಒನ್ ಸಭಾಂಗಣದಲ್ಲಿ ಏರ್ಪಡಿಸಲಾದ ಸಾರಿಗೆ ಇಲಾಖೆಯ ರಸ್ತೆ ಸುರಕ್ಷತಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಜಿಲ್ಲೆಯಲ್ಲಿರುವ ರಸ್ತೆಗಳ ಸುರಕ್ಷತೆಗಾಗಿ ಸಾರಿಗೆ ಇಲಾಖೆಯಲ್ಲಿ ಕಾಯ್ದಿರಿಸಿದ ರೂ. ೦3 ಲಕ್ಷ ಅನುದಾನವನ್ನು ಅಪಘಾತವನ್ನುಂಟುಮಾಡುವ ರೋಡ್ ಬ್ರೇಕರ್‍ಸ್‌ಗಳ ತೆರವುಗೊಳಿಸಲು, ರಸ್ತೆಗಳ ಪಕ್ಕದಲ್ಲಿ ವಿಶೇಷವಾಗಿ ಅಪಘಾತ ವಲಯಗಳಲ್ಲಿ ಸೂಚನಾ ಫಲಕಗಳ ಅಳವಡಿಕೆಗೆ, ಪೊಲೀಸ್ ಬ್ಯಾರಿಕೇಟ್ ಮತ್ತು ಸಿಸಿ ಕ್ಯಾಮೆರಾಗಳ ಅಳವಡಿಕೆಗಾಗಿ ಹಿಗೇ ಅನೇಕ ಕಾರ್ಯಗಳಿಗೆ ಬಳಕೆಮಾಡಬೇಕಾಗಿದೆ ಎಂದು ಹೇಳಿದರು.

ರಸ್ತೆ ಸುರಕ್ಷತಾ ಸಮಿತಿಯಿಂದ ಜಿಲ್ಲೆಯಲ್ಲಿ ಸಂಭವಿಸಬಹುದಾದ ಸ್ಥಳಗಳನ್ನು ಪರಿಶೀಲನೆ ನಡೆಸಿ ತಡೆಗಟ್ಟಲು ಬೇಕಾದ ಕ್ರಮಗಳನ್ನು ಕೈಗೊಳ್ಳಲು ಪ್ರತಿ ಮೂರು ತಿಂಗಳಿಗೊಮ್ಮೆ ಸಮಿತಿ ಸಭೆ ನಡೆಸಿ ಪರಾಮರ್ಶಿಸಲಿದೆ. ಪ್ರಸ್ತುತ ಘಟಿಸುವ ಅಪಘಾತಗಳನ್ನು ಶೇ 10 ರಷ್ಟು ಅಪಘಾತಗಳನ್ನು ಕಡಿಮೆ ಮಾಡಬೇಕೆಂದು ಸಮಿತಿಯ ಉದ್ದೇಶವಾಗಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆಗೆ ಬೇಕಾದ ಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಿದ್ದು ಸಮಿತಿಯ ಶಿಫಾರಸಿನಂತೆ ಎಲ್ಲಾ ಇಲಾಖೆಗಳು ರಸ್ತೆಯನ್ನು ನಿರ್ಮಾಣ ಮಾಡಬೇಕು ಎಂದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ. ನೂರಮಹಮದ ಬಾಷಾ ಅವರು ಮಾತನಾಡಿ, ರಸ್ತೆ ಸುರಕ್ಷತೆಯ ಬಗ್ಗೆ ವಿವರಿಸಿ, ಸರ್ಕಾರದಿಂದ ಕೊಪ್ಪಳ ಜಿಲ್ಲೆಯ ರಸ್ತೆ ಸುರಕ್ಷತಾ ಸಮಿತಿಗೆ ಅನುದಾನ ಬಂದಿದ್ದು, ಈ ಹಣವನ್ನು ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರು, ಇವರ ಖಾತಿಗೆ ಜಮಾ ಮಾಡಲಾಗಿದ್ದು, ಪೊಲೀಸ್ ಇಲಾಖೆಯವರು ರಸ್ತೆ ಸುರಕ್ಷತಾ ಕ್ರಮಗಳಿಗೆ ಈ ಹಣವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಅಕ್ಷಯ್ ಶ್ರೀಧರ್, ಜಿಲ್ಲಾ ವಾರ್ತಾಧಿಕಾರಿ ಬಿ. ಧನಂಜಯಪ್ಪ, ನಗರ ಪೊಲೀಸ್ ಠಾಣೆಯ ಪಿ.ಐ. ಶಿವಾನಂದ ವಾಲಿಕಾರ ಸೇರಿದಂತೆ ಕೆ.ಎಸ್.ಆರ್.ಟಿ.ಸಿ., ಲೋಕೊಪಯೋಗಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

Your email address will not be published.