ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಗಾರ್ತಿ ಮಾತೆ ಮಹಾದೇವಿ ಇನ್ನಿಲ್ಲ


ಬೆಂಗಳೂರು: ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ನಿಧನರಾಗಿದ್ದಾರೆ. 

ಇಲ್ಲಿನ ಮಣಿಪಾಲ್ ಆಸ್ಪತ್ರೆಯಲ್ಲಿ ಉಸಿರಾಟ ತೊಂದರೆಯಿಂದ ದಾಖಲಾಗಿದ್ದರು. ಇಂದು ಸಂಜೆ 4.45 ಸುಮಾರಿಗೆ ಚಿಕಿತ್ಸೆ ಫಲಿಸದೇ ಕೊನೆಯುಸಿರುಯೆಳೆದಿದ್ದಾಳೆ. 

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿರುವ ಬಸವ ಪೀಠದ ಧರ್ಮದ ಅಧ್ಯಕ್ಷೆರಾಗಿದ್ದ ಮಾತೆ ಮಹಾದೇವಿ ಪ್ರತ್ಯೇಕ ಲಿಂಗಾಯತ ಧರ್ಮ ರಚನೆ ಮತ್ತು ಅಲ್ಪಸಂಖ್ಯಾತ ಮಾನ್ಯತೆ ಹೋರಾಟದಲ್ಲಿ ಮಂಚೂನಿಯಲ್ಲಿದ್ದರು.

ಮಾತೆ ಮಹಾದೇವಿ ಮಾರ್ಚ್ 13, 1946ರಂದು ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದರು. ಇವರ ಮೂಲ ಹೆಸರು ರತ್ನ ಆಗಿದ್ದು, ದೀಕ್ಷೆ ಪಡೆದ ಬಳಿಕ ಮಾತೆ ಮಹಾದೇವಿ ಎಂದು ಗುರುತಿಸಿಕೊಂಡಿದ್ದರು.

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ತಜ್ಞವೈದ್ಯರ ತಂಡ ಚಿಕಿತ್ಸೆ ಮುಂದುವರೆಸಿದೆ.
 
ಮೂಲಗಳ ಪ್ರಕಾರ,   ಸುಮಾರು ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು, ಡಯಾಲಿಸಿಸ್​ ಮಾಡಿಸಿಕೊಳ್ಳುತ್ತಿದ್ದರು. ಆದರೆ ಈಗ ಹಿಂದೆಂಗಿಂತಲೂ ಅವರ ಆರೋಗ್ಯ ಹದಗೆಟ್ಟಿತ್ತು ಎನ್ನಲಾಗಿದೆ.
 

Leave a Reply

Your email address will not be published.