ರಮೇಶ ಜಾರಕಿಹೊಳಿ ನಡೆ ಇನ್ನೂ ನಿಗೂಢ !

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ” ಕೈ ” ಅಭ್ಯರ್ಥಿಗಳು ಯಾರು ಎಂಬ ಪ್ರಶ್ನೆ ತೀ್ವ್ರ ಕುತೂಹಲ ಮೂಡಿಸಿದ್ದು, ಮಾಜಿ ಸಚಿವ, ಗೋಕಾಕ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಅವರ ನಡೆ ನಿಗೂಢವಾಗಿದೆ.

ಪಕ್ಷದ ಮುಖಂಡರೊಡನೆ ಮುನಿಸಿಕೊಂಡು ಪಕ್ಷದಿಂದ ಅಂತರ ಕಾದುಕೊಂಡಿರುವ ರಮೇಶ ಜಾರಕಿಹೊಳಿ, ಚುನಾವಣೆಗೆ ಸಂಬಂಧಿಸಿದ ಯಾವ ಪ್ರಕ್ರಿಯೆಗಳಿಗೂ ಸ್ಪಂದಿಸದಿರುವುದು ನಾಯಕರನ್ನು ಗೊಂದಲಕ್ಕೆ ತಳ್ಳಿದೆ.

ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆಗೂ ಗೈರು ಹಾಜರಾಗಿರುವ ರಮೇಶ ಅವರ ಮುಂದಿನ ನಡೆ ಏನು ಎಂಬುದು ಯಾರಿಗೂ ಗೊತ್ತಾಗುತ್ತಿಲ್ಲ. ಹಾಗೆ ನೋಡಿದರೆ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ರಮೇಶ ಹೆಸರು ರಾರಾಜಿಸಿತ್ತು. ಇದೀಗ ಅವರ ನಿಗೂಢ ನಡೆ ಅಚ್ಚರಿಗೆ ಕಾರಣವಾಗಿದೆ.

Leave a Reply

Your email address will not be published.