ಮೈಸೂರು ಜಿಲ್ಲೆಗೆ ಪ್ರತಾಪ್ ಸಿಂಹ ಕೊಡುಗೆ ಏನು? ಸಿದ್ದರಾಮಯ್ಯ ಪ್ರಶ್ನೆ


ಮೈಸೂರು:  ರಾಜ್ಯದಲ್ಲಿ ನಮ್ಮ ಸರಕಾರವಿದ್ದಾಗ ಮಾಡಿದ ಕೆಲಸವನ್ನು ತಾನು ಮಾಡಿದ್ದು ಅಂತಾ ಪ್ರಾತಾಪ್ ಸಿಂಹ ಹೇಳಿಕೊಂಡು ತಿರುಗಾಡುತ್ತಿದ್ದಾನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮೈಸೂರಿಗೆ ಪ್ರತಾಪ್ ಸಿಂಹ ಕೊಡುಗೆ ಏನು? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಪ್ರತಾಪ ಸಿಂಹ ಮಾತ್ರವಲ್ಲ, ಬಿಜೆಪಿಯ ಯಾವ ಸಂಸದರೂ ರಾಜ್ಯದಲ್ಲಿ  ಯಾವ ಕೆಲಸ ಮಾಡಿಲ್ಲ. ಅಭಿವೃದ್ದಿ ವಿಷಯದಲ್ಲಿ ನಮ್ಮ ಪಕ್ಷದ ಚಾಮರಾಜನಗರ ಸಂಸದ ಧ್ರುವ ನಾರಾಯಣ ಜತೆಗೆ ಚರ್ಚೆಗೆ ಶೋಭಾ ಕರಂದ್ಲಾಜೆ, ನಳೀನ್ ಕುಮಾರ್ ಕಟೀಲ್, ಅನಂತಕುಮಾರ್ ಹೆಗಡೆ ಬರುತ್ತಾರಾ? ಬಿಜೆಪಿಯವರು ಏನು ಮಾಡದೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಈ ಬಾರಿ ಚುನಾವಣೆಯಲ್ಲಿ  20  ಕ್ಕೂ ಹೆಚ್ಚು ಸೀಟುಗಳನ್ನು ನಾವು  ಗೆಲ್ಲುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ರಾಜ್ಯದ 28 ಕ್ಷೇತ್ರದಲ್ಲಿಯೂ  ಅಭ್ಯರ್ಥಿಗಳ ಪರ ನಾನು ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.

Leave a Reply

Your email address will not be published.