ಮತದಾನ ಪ್ರಮಾಣ ಹೆಚ್ಚಿಸಲು ಜಾಗೃತಿ ಅವಶ್ಯ: ಇಓ ಜಗದೇವಪ್ಪ


ಸುರಪುರ:  ಮತದಾನ ಪ್ರಮಾಣ ಹೆಚ್ಚಿಸಲು ಶಾಲಾ-ಕಾಲೇಜುಗಳಲ್ಲಿ  ಚುನಾವಣಾ ಸಾಕ್ಷರತಾ ಕ್ಲಬ್ ಮೂಲಕ ಮಕ್ಕಳ  ಪೋಷಕರು ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಲು ಜಾಗೃತಿ ಮೂಡಿಸುವುದು ಅವಶ್ಯ ಎಂದು ತಾ ಪಂ ಕಾರ್ಯನಿರ್ವಹಣಾಧಿಕಾರಿ ಜಗದೇವಪ್ಪ ಹೇಳಿದರು.

ನಗರದ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ಶಾಲಾ ಕಾಲೇಜುಗಳಲ್ಲಿ ಸ್ಥಾಪಿಸಲಾದ ಚುನಾವಣಾ ಸಾಕ್ಷರತಾ ಕ್ಲಬ್ ಸಂಚಾಲಕರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ದೇಶದಲ್ಲಿ ಚುನಾವಣೆಗಳು ಆರಂಭಗೊಂಡು 70 ವರ್ಷಗಳಾದರೂ ಇಲ್ಲಿಯವರೆಗೂ ಕಡ್ಡಾಯ ಮತದಾನ ಮತದಾನ ಸಾಧ್ಯವಾಗಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ನಮ್ಮಲ್ಲಿ ಹೆಚ್ಚು ಮತದಾನ ನಡೆಯುತ್ತದೆ ಆದರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗುತ್ತದೆ ಇದಕ್ಕೆ ಮತದಾರರಲ್ಲಿ ಜಾಗೃತಿ ಇಲ್ಲದಿರುವುದೇ ಕಾರಣ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಅಮರೇಶ ಕುಂಬಾರ ಮಾತನಾಡಿ,  ಜನರಲ್ಲಿ ಮತದಾನ ಬಗ್ಗೆ ಜಾಗೃತಿ ಮೂಡಿಸಿ ಮತದಾನ ಪ್ರಮಾಣ ಹೆಚ್ಚು ಮಾಡಬೇಕು ಎಂದು ಉದ್ದೇಶದಿಂದ ಚುನಾವಣಾ ಸಾಕ್ಷರತಾ ಕ್ಲಬ್ ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು.

ತಹಸೀಲ್ದಾರ್  ಸುರೇಶ ಅಂಕಲಗಿ, ಬಿ.ಇ.ಓ ನಾಗರತ್ನ ಓಲೇಕಾರ, ಕಾಲೇಜಿನ ಪ್ರಾಂಶುಪಾಲ ಬಸವರಾಜ ಕೊಡೇಕಲ್, ಉಪ ಪ್ರಾಂಶುಪಾಲ ಗುರುಲಿಂಗಪ್ಪ ಖಾನಾಪುರ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ಬಿ.ಆರ್.ಪಿ ಖಾದರ ಪಟೇಲ, ಸಿ.ಆರ್.ಪಿ ಸೇವಾ ನಾಯಕ ಉಪಸ್ಥಿತರಿದ್ದರು.

Leave a Reply

Your email address will not be published.