ಶಿಕ್ಷಕಿಗೆ ಅಶ್ಲೀಲ ಮೆಸೇಜ್:ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷನ ಮೇಲೆ ಕ್ರಮಕ್ಕೆ ಡಿಎಸ್‌ಎಸ್ ಒತ್ತಾಯ

ಸುರಪುರ: ತಾಲೂಕಿನ ಶಾಂತಪುರ ಗ್ರಾಮದ ಸರಕಾರಿ ಶಾಲೆಯ ಸಹ ಶಿಕ್ಷಕ ಪದ್ಮಾವತಿ ಅವರಿಗೆ ವಿನಾಕಾರಣ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ ಶಿಕ್ಷಕನ ಮೇಲೆ ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಆಗ್ರಹಿಸಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ಸಂಘದ ಜಿಲ್ಲಾಧ್ಯಕ್ಷ ಹಳ್ಳೆಪ್ಪ ಕಾಂಜಾಂಜಿ ಹಾಗೂ ಶಿಕ್ಷಕಿ ಪದ್ಮಾವತಿಗೆ ಮಾನಸಿಕ ಹಿಂಸೆ ನೀಡಿದ ದೇವಪುರ ಶಾಲೆಯ ಶಿಕ್ಷಕಿ ವಿಜಯಲಕ್ಷ್ಮಿ ಗೌಡರ್ ಇವರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಹಾಗೂ ಇವರಿಬ್ಬರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ತಾಲೂಕು ಘಟಕ ಹಾಗೂ ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟ ಕರ್ನಾಟಕ ದಲಿತ ಮಹಿಳಾ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮತ್ತು ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದಿದ್ದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸಲ್ಲಿಸುತ್ತಾ, ಶೀಘ್ರದಲ್ಲಿ ಈ ಮೇಲ್ಕಾಣಿಸಿದ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ಎ. 10 ರಂದು ನೇ ಬಿಇಒ ಕಚೇರಿ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕ ಅಧ್ಯಕ್ಷರು ತಿಪ್ಪಣ್ಣ ಶೆಳ್ಳಿಗಿ, ಜೆಟ್ಟೆಪ್ಪ ನಾಗರಾಳ,ಮಹೇಶ್ ಯಾದಗಿರಿ, ಖಾಜಾಹುಸೇನ್ ಮರಿಲಿಂಗಪ್ಪ ಹುಣಸಿಹೊಳೆ ಮಲ್ಲಿಕಾರ್ಜುನ್ ಮಳ್ಳಳ್ಳಿ ಸೇರಿದಂತೆ ಅನೇಕರಿದ್ದರು.

Leave a Reply

Your email address will not be published.