ಅಂಜಲಿ ನಿಂಬಾಳ್ಕರ್ ಆರೋಗ್ಯದಲ್ಲಿ ಚೇತರಿಕೆ, ಇಂದು ಸಂಜೆ ಬಿಡುಗಡೆ


ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಲೋಕಸಭೆಗೆ ಪ್ರಚಾರಾರ್ಥ ನಾಂದೇಡ್ ಗೆ ತೆರಳುತ್ತಿದ್ದ ಸಮಯದಲ್ಲಿ ಸೋಲಾಪುರ ಸಮೀಪ ಕಾರು ಅಪಘಾತವಾಗಿತ್ತು. ಶಾಸಕಿಗೆ ತಲೆಗೆ ಸಣ್ಣ ಪುಟ್ಟ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆ ಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಕಾರಿನ ಚಾಲಕ ಮತ್ತು ಗನ್ ಮ್ಯಾನ್ ಗೂ ಸಣ್ಣಪುಟ್ಟ ಗಾಯಗಳಾಗಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಸಂಜೆ ಅಂಜಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.



Leave a Reply

Your email address will not be published.