ಚುನಾವಣೆ ಫಲಿತಾಂಶದ ಬಳಿಕ ರಾಜಕೀಯ ಬದಲಾವಣೆ ಅಂದ್ರು ಬಾಲಚಂದ್ರ ಜಾರಕಿಹೊಳಿ…!

ಗೋಕಾಕ:ಲೋಕಸಭೇ ಚುನಾವಣೆ ಫಲಿತಾಂಶ ಪ್ರಕಟವಾಗಲಿರುವ ಮೇ 23 ರ ನಂತರ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ಆಗಲಿದೆ ಎಂದು ಹೇಳುವ ಮೂಲಕ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಗೋಕಾಕ ತಾಲೂಕಿನ ಕಲ್ಲೋಳಿಯಲ್ಲಿ ಮಾತನಾಡಿದ ಅವರು, ಯಾವ ರೀತಿಯ ಬದಲಾವಣೆ ಆಗಲಿದೆ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಡಲಿಲ್ಲ.

ಹಾಗೆಯೇ ಮಾಜಿ ಸಚಿವ ರಮೇಶ ಜಾರಕಿಹೊಳಿ ಬಿಜೆಪಿ ಸೇರ್ಪಡೆ ಕುರಿತಾಗಿಯೂ ಅವರು ಯಾವುದೇ ಮಾಹಿತಿ ನೀಡದೇ ಗುಟ್ಟಾಗಿಟ್ಟಿರುವುದು ಹಲವು ರೀತಿಯ ಊಹಾಪೋಹಗಳಿಗೆ ಕಾರಣವಾಗಿದೆ.

Leave a Reply

Your email address will not be published.