ನಾಳೆ 14 ಕ್ಷೇತ್ರಗಳಲ್ಲಿ ಮತದಾನ

ಬೆಂಗಳೂರು: ರಾಜ್ಯದ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಒಟ್ಟು ಹದಿನಾಲ್ಕು ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಮತದಾನ ನಡೆಯಲಿದೆ.

ನಿಗದಿಯಾಗಿರುವ ಮತಗಟ್ಟೆಗಳಿಗೆ ಸಿಬ್ಬಂದಿ ಈಗಾಗಲೇ ತೆರಳಿದ್ದು, ಮತದಾನಕ್ಕೆ ಎಲ್ಲ ಸಿದ್ದತೆ ಮಾಡಿಕೊಂಡಿದ್ದಾರೆ.

ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಲಿದ್ದು, ಸಂಜೆಯವರೆಗೂ ನಡೆಯಲಿದೆ.

ಹೈ ವೋಲ್ಟೇಜ್ ಕ್ಷೇತ್ರವೆನಿಸಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಷ, ನಿಖಿಲ್ ಕುಮಾರಸ್ವಾಮಿ, ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೇರಿದಂತೆ ಹಲವರ ಭವಿಷ್ಯ ನಾಳೆ ಮತಪೆಟ್ಟಿಗೆ ಸೇರಲಿದೆ.

ಏಪ್ರಿಲ್ 23 ರಂದು ಇನ್ನುಳಿದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 23 ಕ್ಕೆ ಮತ ಎಣಿಕೆ ನಿಗದಿಯಾಗಿದೆ.

ಏತನ್ಮಧ್ಯೆ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮತದಾನದ ವ್ಯವಸ್ಥೆಯ ಮಾಹಿತಿ ನೀಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ್, ನಾಳೆ ರಾಜ್ಯದಲ್ಲಿ ಮೋದಿ ನಡೆಸಲಿರುವ ಪ್ರಚಾರ ಭಾಷಣದ ಸಂದರ್ಭದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳ ಕುರಿತು ಮಾತನಾಡದಿರುವಂತೆ ಸೂಚನೆ ನೀಡಿದ್ದಾರೆ.

Leave a Reply

Your email address will not be published.