ಚುನಾವಣೆ ನೆಪ ಹೇಳಿ ಕಾಲಹರಣ: ವಿವಿಧ ಇಲಾಖೆಯ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಗೋಕಾಕ: ನಗರದ ಹೊರವಲಯದ ಪ್ರವಾಸಿ ಮಂದಿರದ ಆವರಣದಲ್ಲಿ ಸೋಮವಾರದಂದು ರಾಜ್ಯ ರೈತ ಸಂಘದ ತಾಲೂಕಾ ಘಟಕದ ಮಾಸಿಕ ಸಭೆ ಜರುಗಿತು.

ಸಭೆಯಲ್ಲಿ ಚರ್ಚೆಯ ಸಮಯದಲ್ಲಿ ರೈತ ಸಂಘದ ಕಾರ್ಯಕರ್ತರು ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿಲ್ಲ, ಲೋಕಸಭಾ ಚುನಾವಣೆಯ ಕಾರಣ ಮುಂದಿಟ್ಟುಕೊಂಡು ಅಧಿಕಾರಿಗಳು ನಾವು ಮಿಟಿಂಗ್ ಹೋಗಿದ್ದೇವೆ ಎಂದು ಹೇಳುತ್ತಾ ರೈತರ ಕೆಲಸ ಕಾರ್ಯಗಳನ್ನು ಮಾಡಿಕೊಡುತ್ತಿಲ್ಲ, ಪ್ರಮುಖವಾಗಿ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆಯು ತಲೆದೋರಿದ್ದು ಈ ಬಗ್ಗೆ ಗಮನ ಹರಿಸಬೇಕಾಗಿದ್ದ ಹೆಸ್ಕಾಂ ಅಧಿಕಾರಿಗಳು ಚುನಾವಣೆಯ ಹೆಸರಿನಲ್ಲಿ ಕಾಲಹರಣ ಮಾಡುತ್ತಿದ್ದಾರೆಂದು ದೂರಿದರು. ಇದು ಹೀಗೆ ಮುಂದುವರಿದರೆ ಪ್ರತಿಭಟನೆ ಅನಿವಾರ್ಯ ಎಂದ ರೈತ ಸಂಘದ ಕಾರ್ಯಕರ್ತರು ಯಾವುದೇ ಪಕ್ಷದ ಪರವಾಗಿ ಪ್ರಚಾರ ಕಾರ್ಯಗಳಲ್ಲಿ ಪಾಲ್ಗೊಳ್ಳಬಾರದೆಂದು ನಿರ್ಣಯಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ, ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ, ಜಿಲ್ಲಾ ಸಂಚಾಲಕ ಮಂಜುನಾಥ ಪೂಜೇರಿ, ತಾಲೂಕಾಧ್ಯಕ್ಷ ಮುತ್ತೆಪ್ಪ ಬಾಗನ್ನವರ, ಭರಮು ಖೆಮಲಾಪೂರೆ, ಗೋಪಾಲ ಕುಕನೂರ, ಯಲ್ಲಪ್ಪ ತಿಗಡಿ, ಪುಂಡಲೀಕ ನಿಡಸೋಸಿ, ಮಲ್ಲಿಕಾರ್ಜುನ ಈಳಿಗೇರ, ಈರಪ್ಪ ಖನಗಾರ, ಶಂಕರ ಮದಿಹಳ್ಳಿ, ಮಹಾಂತೇಶ ಖಾನಟ್ಟಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published.