ಮಂಡ್ಯದಲ್ಲಿ ಅಬ್ಬರದ ಪ್ರಚಾರ ನಡೆಸಿದ ನಟ ದರ್ಶನಗೆ ಐಟಿ ಶಾಕ್..!

ಮೈಸೂರು: ನಟ ದರ್ಶನ ಫಾರ್ಮ್ ಹೌಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಲ್ಲಿನ ಟಿ. ನರಸೀಪುರನಲ್ಲಿರುವ ನಟ ದರ್ಶನ ಫಾರ್ಮ್ ಹೌಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ನಡೆಸುತ್ತಿರುವ ದರ್ಶನಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಪರಿಶೀಲನೆ ಬಳಿಕ ಐಟಿ ಅಧಿಕಾರಿಗಳಿಗೆ ಯಾವುದೇ ಹಣ ಸಿಕ್ಕಿಲ್ಲ. ಕೆಲ ದಾಖಲೆಗಳನ್ನು ಮಾತ್ರ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published.