ರಮೇಶ ವಿರುದ್ಧ ಕ್ರಮಕ್ಕೆ ಶಿಫಾರಸ್ಸು, ಲಖನ್ ಮುಂದಿನ ಲೀಡರ್:ಸ್ಫೋಟಕ ಸುದ್ದಿ ಹೊರ ಹಾಕಿದ ಸತೀಶ ಜಾರಕಿಹೊಳಿ !

ಬೆಳಗಾವಿ: ಗೋಕಾಕ ಕ್ಷೇತ್ರದ ” ಕೈ ” ಶಾಸಕ ರಮೇಶ ಜಾರಕಿಹೊಳಿ ವಿರುದ್ದ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಪಕ್ಷ ಹೈಕಮಾಂಡ್ ಗೆ ಪತ್ರ ಬರೆದು ಮನವಿ ಮಾಡಿದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಸ್ಪೋಟಕ ಮಾಹಿತಿಯನ್ನು ಬಹಿರಂಗಗೊಳಿಸಿದ್ದಾರೆ.

ಗೋಕಾಕ ತಾಲೂಕಿನ ಕೊಳವಿಯಲ್ಲಿ ಈ ಮಾಹಿತಿ ಬಹಿರಂಗ ಪಡಿಸಿದ ಸಚಿವರು, ರಮೇಶ ಕಾಂಗ್ರೆಸ್ ಪಕ್ಷದಲ್ಲಿ ಇರುವ ಸಾಧ್ಯತೆ ಕಡಿಮೆ. ಚಿಕ್ಕೋಡಿ , ನಿಪ್ಪಾಣಿಯಲ್ಲಿ ಅವರು ಬಿಜೆಪಿ ಪರ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೈ ಕಮಾಂಡ್ ಗೆ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿಕೊಂಡಿದೆ ಎಂದು ತಿಳಿಸಿದರು.

ಗೋಕಾಕ ಕ್ಷೇತ್ರದಲ್ಲಿ ರಮೇಶ ಬದಲಾಗಿ ಲಖನ್ ಜಾರಕಿಹೊಳಿ ಅವರನ್ನು ಪರ್ಯಾಯ ನಾಯಕನ್ನಾಗಿ ಬೆಳೆಸುವಂತೆಯೂ ಮನವಿಯಲ್ಲಿ ತಿಳಿಸಲಾಗಿದೆ ಎಂದೂ ಸಚಿವರು ತಿಳಿಸಿದರು.

Leave a Reply

Your email address will not be published.