ಪಕ್ಷ ಸಂಘಟನೆಯಿಂದ ಬಲವರ್ಧನೆ: ಸತೀಶ ಜಾರಕಿಹೊಳಿ

ಅಥಣಿ: ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷ ಸಂಘನೆಯಿಂದ ನಮ್ಮೆಲ್ಲರ ಶಕ್ತಿ ವರ್ಧನೆ ಸಾಧ್ಯವಾಗುತ್ತದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮಾಜಿ ಶಾಸಕ ಶಹಾಜಾನ ಡೊಂಗರಗಾಂವ ಮನೆಯ ಸಭಾಮಂಟಪದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವರು, ಕಾಗವಾಡ ಮತ್ತು ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರ ಅವಧಿಯಲ್ಲಿ ಪಕ್ಷದ ಕಾರ್ಯಕರ್ತರು ಅನುಭವಿಸಿದ ಸ್ಥಿತಿಯನ್ನು ನೆನಪಿಸಿಕೊಂಡರೆ ಭಯವಾಗುತ್ತದೆ. ಅಂತಹ ಸ್ಥಿತಿ ಮತ್ತೊಮ್ಮೆ ಮರುಕಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಪಕ್ಷದ ಹಿರಿಯ ಮುಖಂಡರು ಮತ್ತು ಶಾಸಕರು ಎಲ್ಲಾ ಹಂತದ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು. ಎಲ್ಲ ಹಂತದವರಿಗೂ ಜವಾಬ್ದಾರಿ ವಹಿಸುವುದರಿಂದ ಪಕ್ಷ ಸಂಘಟನೆಗೆ ಬಲ ಬರುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಅಥಣಿ ನಗರದ ಚುನಾವಣಾ ಪ್ರಚಾರ ಜವಾಬ್ದಾರಿಯನ್ನು ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರಿಗೆ ವಹಿಸಬೇಕು. ಜತೆಗೆ ಆಯಾ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಸದಸ್ಯರಿಗೆ ಜವಾಬ್ದಾರಿ ವಹಿಸಬೇಕು ಎಂದು ಸಲಹೆ ಮಾಡಿದರು.

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಪ್ರಚಾರದಲ್ಲಿ ಭಾಗವಹಿಸುವ ಕುರಿತಂತೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದೂ ಅವರು ಹೇಳಿದರು.

ಶಾಸಕ ಮಹೇಶ ಕುಮಠಳ್ಳಿ, ಮಾಜಿ ಶಾಸಕ ಶಹಾಜಾನ ಡೊಂಗರಗಾಂವ, ಬಸವರಾಜ ಬುಟಾಳೆ, ಲಕ್ಷ್ಮಣರಾವ್ ಚಿಂಗಳೆ, ಎಸ್. ಕೆ. ಬುಟಾಳೆ, ಎಸ್. ಎಂ. ನಾಯಕ, ಶಶಿ ಸಾಳವೆ ಇನ್ನೂ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published.