ರಾಹುಲ್ 19 ರಂದು ಚಿಕ್ಕೋಡಿಗೆ , ಪ್ರಿಯಾಂಕಾ ಬರಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಮತ್ತು ಬೆಳಗಾವಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ -ಜೆಡಿಎಸ್ ದೋಸ್ತಿ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಡೋಲಿಯಲ್ಲಿ ಪ್ರಚಾರಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಏಪ್ರಿಲ್ 19 ರಂದು ಚಿಕ್ಕೋಡಿಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದು, ಪ್ರಿಯಾಂಕಾ ಗಾಂಧಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಚಾರದ ಅಬ್ಬರ ಎದ್ದು ಕಾಣುತ್ತಿಲ್ಲ, ಎಲ್ಲಾ ನಾಯಕರು ಚಿಕ್ಕೋಡಿಗೆ ಹೆಚ್ಚು ಒತ್ತು ನೀಡುತ್ತಿದ್ದಾರಲ್ಲ ? ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಹಾಗೇನೂ ಇಲ್ಲ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳ ಪ್ರಚಾರ ಚೆನ್ನಾಗಿಯೇ ಇದೆ ಎಂದರು.

ಬೆಳಗಾವಿ ಕ್ಷೇತ್ರದಲ್ಲಿ ಹೆಚ್ಚು ಪೈಪೋಟಿ ಇರುವುದು ನಿಜ. ಆದರೆ, ರಾಹುಲ್ ಅಲೆ ಸಾಧುನವರ ಗೆಲುವಿಗೆ ಅನುಕೂಲ ಕಲ್ಪಿಸಿಕೊಡಲಿದೆ. ಇಂತಿಷ್ಟೇ ಅಂತರದಿಂದ ಗೆಲ್ಲುತ್ತಾರೆ ಎಂದು ಹೇಳಲಾಗದಿದ್ದರೂ ಗೆಲುವು ಸಾಧಿಸುತ್ತಾರೆಂದು ವಿಶ್ವಾಸದಿಂದ ಹೇಳಬಹುದು ಎಂದು ಸಚಿವರು ತಿಳಿಸಿದರು.

Leave a Reply

Your email address will not be published.