ಕುಂದಗೋಳ ಉಪಚುನಾವಣೆ: “ಕೈ” ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಮುಂದಾದ ಸತೀಶ ಜಾರಕಿಹೊಳಿ

ಬೆಳಗಾವಿ: ಪೌರಾಡಳಿತ ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ ಹಠಾತ್ ನಿಧನದಿಂದ ತೆರವಾಗಿರುವ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಮೇ 19 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸುವುದಾಗಿ ಅರಣ್ಯ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಈ ಸಂಬಂಧ ನಾಳೆ ( ಏ. 28) ಕ್ಷೇತ್ರದಲ್ಲಿ ಸಭೆ ನಡೆಸಲಾಗುತ್ತಿದೆ. ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ನಿರಂತರ ಸಭೆ ಮತ್ತು ಪ್ರಚಾರ ನಡೆಸುವ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳುವುದಾಗಿ ಸಚಿವರು ಬೆಳಗಾವಿಯಲ್ಲಿ ಶನಿವಾರ ತಿಳಿಸಿದರು.

ಅಳಿಯ ಅಂಬಿರಾವ್ ಪಾಟೀಲ ಮಾಡಿದ್ದಾರೆ ಎನ್ನಲಾದ ಅವ್ಯವಹಾರಗಳ ಕುರಿತು ಸಂತೋಷ ಜಾರಕಿಹೊಳಿ ಆಪಾದಿಸಿದ್ದಾರೆ. ಆ ಬಗ್ಗೆ ತಾವು ಏನನ್ನೂ ಹೇಳಲು ಬಯಸುವುದಿಲ್ಲ. ಅನ್ಯಾಯಕ್ಕೊಳಗಾದವರು ಆಪಾದನೆ ಮಾಡುವುದು ಸಹಜ ಎಂದು ಹೇಳಿದರು.

Leave a Reply

Your email address will not be published.