ಇಳಿ ಜಾರಿಗೆ ಟ್ರ್ಯಾಕ್ಟರ್ ಪಲ್ಟಿ: ನಾಲ್ವರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ತುಮಕೂರು; ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ
ತಿಪಟೂರು ತಾಲೂಕಿನ ಹತ್ಯಾಳು ಗ್ರಾಮದ ನರಸಿಂಹಸ್ವಾಮಿ ಬೆಟ್ಟದಲ್ಲಿ ನಡೆದಿದೆ.

ಕಡಿದಾದ ಇಳಿಜಾರು ಇದ್ದದ್ದರಿಂದ ನಿಯಂತ್ರಣಕ್ಕೆ ಬಾರದ ಟ್ಯಾಕ್ಟರ್ ಪಲ್ಟಿಯಾಗಿದೆ. ಸುಮಾರು 20 ಜನರು ಪ್ರಯಾಣಿಸುತ್ತಿದ್ದು, ನಾಲ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದರೇ ಉಳಿದವರಿಗೆ ಸಣ್ಣ ಪುಟ್ಟ ಗಾಯಗಾಳಾಗಿವೆ.‌ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಯಾಣಿಕರನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ‌ ಮಾದಾಪುರ ಗ್ರಾಮದವರು ಎಂದು ತಿಳಿದು ಬಂದಿದ್ದು, ಮೃತರ ಹೆಸರು‌ ಇನ್ನು ಗೊತ್ತಾಗಿಲ್ಲ.

Leave a Reply

Your email address will not be published.