ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಮಾಡಲಿ: ಯಡಿಯೂರಪ್ಪ ಸವಾಲು

ಕಲಬುರ್ಗಿ: ಮಲ್ಲಿಕಾರ್ಜುನ ಖರ್ಗೆ ಎಂದೋ ಮುಖ್ಯಮಂತ್ರಿ ಆಗಬೇಕಿತ್ತು ಎಂಬ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, “ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ. ನಾಳೆಯೇ ರಾಜೀನಾಮೆ ನೀಡಿ ತಮ್ಮ ಕನಸು ನನಸಾಗಿಸಿಕೊಳ್ಳಲಿ” ಎಂದು ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಚಿಂಚೋಳಿ ದತ್ತು ಪಡೆಯುವುದಾಗಿ ಹೇಳಿದ ಕುಮಾರಸ್ವಾಮಿ ಚಿಂಚೋಳಿ ಕಡೆಗೆ ತಿರುಗಿಯೂ ನೋಡದೆ ಚುನಾವಣೆ ಇದೆ ಅಂತ ಏನೇನೋ ಭರವಸೆಕೊಟ್ಟು ಹೋಗಿದ್ದಾರೆ. ಚಿಂಚೋಳಿ ದತ್ತು ಪಡೆಯುವುದಾದರೆ ಇಷ್ಟು ದಿನ ಏನು ಮಾಡುತ್ತಿದ್ದರು ಎಂದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕಿತ್ತು ಎಂಬುದು ಬಾಲಿಶ ಹೇಳಿಕೆ ಮತ್ತು ಚುನಾವಣೆ ಗಿಮಿಕ್ ಆಗಿದೆ. ಖರ್ಗೆ ಅವರ ಹಿರಿತನ ಮತ್ತು ಅವರ ಸೇವೆಯನ್ನು ಕಾಂಗ್ರೆಸ್ ಸದುಪಯೋಗ ಮಾಡಿಕೊಳ್ಳುತ್ತಿಲ್ಲ. ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲು ಕುಮಾರಸ್ವಾಮಿ ರಾಜೀನಾಮೆ ಕೊಡಬೇಕು’ ಎಂದು ಒತ್ತಾಯಿಸಿದರು.

Leave a Reply

Your email address will not be published.