ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿಪ್ರತಿ ಕ್ವಿಂಟಾಲ್‌ಗೆ 4620 ರೂ. ನಿಗದಿ : ಪಿ.ಸುನೀಲ್ ಕುಮಾರ್

ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿಪ್ರತಿ ಕ್ವಿಂಟಾಲ್‌ಗೆ  4620 ರೂ. ನಿಗದಿ : ಪಿ.ಸುನೀಲ್ ಕುಮಾರ್

ಕೊಪ್ಪಳ :ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ರೂ.4620 ರಂತೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ರವರು ತಿಳಿಸಿದರು. 

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾದ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹಿಂಗಾರು ಹಂಗಾಮಿನ ಕಡಲೆಕಾಳು ಖರೀದಿಸುವ ಸಂಬಂಧ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.  

2018-19ನೇ ಸಾಲಿನ ಹಿಂಗಾರು ಹಂಗಾಮಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ರೂ.4620 ರಂತೆ ಕೊಪ್ಪಳ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ ಬೆಲೆ ನಿಗದಿಪಡಿಸಲಾಗಿದೆ ಎಂದರು.

ಜಿಲ್ಲೆಯ ರೈತರು ಇದರ ಸದುಪಯೋಗಪಡಿಸಿಕೊಂಡು ಯೋಜನೆಯ ಯಶಸ್ಸಿಗೆ ಸಹಕರಿಸಬೇಕು.  ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು.  ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು.  ಯಾವುದೇ ಸಮಸ್ಯೆಗಳಿದ್ದಲ್ಲಿ ಕೊಪ್ಪಳ, ಕುಷ್ಟಗಿ, ಕುಕನೂರು ಹಾಗೂ ಗಂಗಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯವರನ್ನು ಹಾಗೂ ಶಾಖಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಶಾಖೆ ಕೊಪ್ಪಳ ದೂರವಾಣಿ ಸಂಖ್ಯೆ. 08539-230010, ಇವರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ರವರು ತಿಳಿಸಿದರು. 

ಸಭೆಯಲ್ಲಿ ಉಪವಿಭಾಗಾಧಿಕಾರಿ ಸಿ.ಡಿ. ಗೀತಾ, ಜಂಟಿ ಕೃಷಿ ನಿರ್ದೇಶಕಿ ಶಬಾನ ಎಂ. ಶೇಖ್, ತೋಟಗಾರಿಕೆ ಇಲಾಖೆಯ ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದೇ ಸಂದಭ್ದಲ್ಲಿ ಉಪಸ್ಥಿತರಿದ್ದರು.  

ಖರೀದಿ ಕೇಂದ್ರಗಳು;   ಕುಕನೂರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣ.  ಕುಷ್ಟಗಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣ.  ಕನಕಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣ ಹಾಗೂ ಪಿ.ಎ.ಸಿ.ಎಸ್., ಹಿರೇಸಿಂಧೋಗಿಯಲ್ಲಿ ಕಡಲೆಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.  

Leave a Reply

Your email address will not be published.