ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ: ರಾತ್ರಿಯೂ ಹಾರಾಡಿದ ರಾಷ್ಟ್ರಧ್ವಜ

ಕಾಗವಾಡ: ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನ ಮೋಳೆ ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ರಾತ್ರಿಯೂ ರಾಷ್ಟ್ರಧ್ವಜ ಹಾರಾಡಿದ ಸಂಗತಿ ಬೆಳಕಿಗೆ ಬಂದಿದೆ.

ಸಂಜೆ 6 ಗಂಟೆಗೆ ಧ್ವಜ ಇಳಿಸಬೇಕಿದ್ದ ಗ್ರಾಮ ಪಂಚಾಯಿತಿ ಸಿಬ್ಬಂದಿ ತೋರಿರುವ ನಿರ್ಲಕ್ಷ್ಯದಿಂದ ರಾತ್ರಿ 8 ಗಂಟೆವರೆಗೂ ಕಟ್ಟಡ ಮೇಲೆ ಹಾರಾಡಿದೆ. ಗ್ರಾಮಸ್ಥರು ಅಧಿಕಾರಿಗಳನ್ನು, ಸಿಬ್ಬಂದಿಗೆ ತೀವ್ರ ತರಾಟೆಗೆ ತಗೆದುಕೊಂಡಿದ್ದಾರೆ. ಬಳಿಕ ಎಚ್ಚೆತ್ತ ಸಿಬ್ಬಂದಿ ರಾತ್ರಿ ಎಂಟು ಗಂಟೆ ಸುಮಾರಿಗೆ ಆಗಮಿಸಿ ಧ್ವಜ ಕೆಳಗಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದರೆ.

Leave a Reply

Your email address will not be published.