ಮೇ.23 ರ ಬಳಿಕ ಬಿಜೆಪಿ ಶಾಸಕರೇ ಕಾಂಗ್ರೆಸ್ ಸೇರುತ್ತಾರಾ?

ಕಲಬುರಗಿ:  ಮೇ.23 ರ ಬಳಿಕ ಬಿಜೆಪಿ ಶಾಸಕರೇ ಕಾಂಗ್ರೆಸ್ ಸೇರಲಿದ್ದಾರೆ ಎಂದು
ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೊಸ್ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಅವರು ನಿರೀಕ್ಷಿಸಿದಂತೆ ಕಾಂಗ್ರೆಸ್​ನ ಯಾವ ಶಾಸಕರು ಕೂಡ ಬಿಜೆಪಿಗೆ ಹೋಗುವುದಿಲ್ಲ. ಬದಲಾಗಿ ಬಿಜೆಪಿಯವರೇ ಕಾಂಗ್ರೆಸ್​ಗೆ ಬರಲಿದ್ದಾರೆ ಎಂದರು.

ದೋಸ್ತಿ ಸರ್ಕಾರಕ್ಕೆ ಯಾವುದೇ ದಕ್ಕೆಯಿಲ್ಲ. ನಾವು ಐದು ವರ್ಷ ಆಡಳಿತ ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.

ದೋಸ್ತಿ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಸಣ್ಣಪುಟ್ಟ ಗೊಂದಲಗಳಿದ್ದರೆ ಬಗೆಹರಿಸಿಕೊಳ್ಳಲಾಗುವುದು. ಸರ್ಕಾರ ಬಂದು ಒಂದು ವರ್ಷ ಆಯ್ತು, ಏನೂ ತೊಂದರೆಯಾಗಿಲ್ಲ. ಮೇ 23ರ ಬಳಿಕವೂ ಸರ್ಕಾರ ಮುಂದುವರಿಯುತ್ತದೆ. ಆದರೆ, ದೇಶದಲ್ಲಿ ಮೋದಿ ಸರ್ಕಾರ ಅಧಿಕಾರದಲ್ಲಿರಲ್ಲ ಎಂದರು.

ಕಾಂಗ್ರೆಸ್ ಶಾಸಕನ ರಾಜೀನಾಮೆಯಿಂದಾಗಿ ಚಿಂಚೋಳಿಯಲ್ಲಿ ಉಪಚುನಾವಣೆ ನಡೆಯುತ್ತಿದೆ. ಕುಂದಗೋಳ ಚುನಾವಣೆ ದುರದೃಷ್ಟಕರವಾಗಿದೆ. ಉಮೇಶ್​ ಜಾಧವ್​ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸೇರಿದಂತೆ ಹಲವು ಸ್ಥಾನಮಾನ ನೀಡಲಾಗಿತ್ತು ಎಂದು ಜಾಧವ್​ ವಿರುದ್ಧ ಅಸಮಾಧಾನ ಹೊರಹಾಕಿದರು.

Leave a Reply

Your email address will not be published.