ಮಾಜಿ ಕುಲಸಚಿವ ಮನೆ ಮೇಲೂ ಎಸಿಬಿ ಅಧಿಕಾರಿಗಳ ದಾಳಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಇಲ್ಲಿನ ಶ್ರೀನಗರದಲ್ಲಿರುವ ಮಾಜಿ ಕುಲಸಚಿವ ಕಲ್ಲಪ್ಪಾ ಹೊಸಮನಿ ಮನೆ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಅಧಿಕಾರ ದುರುಪಯೋಗ ಮತ್ತು ಅಕ್ರಮ ಆಸ್ತಿ ಸಂಗ್ರಹದಂತಹ ಆರೋಪಗಳು ಮಾಜಿ ಕುಲಸಚಿವ ಎದುರಿಸುತ್ತಿದ್ದಾರೆ.

Leave a Reply

Your email address will not be published.