ಜೂನ್ ೨೧ ರಂದು ಯಾದಗಿರಿಗೆ ಕುಮಾರಸ್ವಾಮಿ

ಶಹಾಪುರ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯಕ್ಕಾಗಿ ಜೂನ್ ೨೧ ರಂದು ಯಾದಗಿರಿಗೆ ಆಗಮಿಸಲಿದ್ದಾರೆ.

ಅಂದು ಸಂಜೆ ಗುರುಮಠಕಲ್ ತಾಲ್ಲೂಕಿನ ಚಂಡರಿಕಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಬೆಳಿಗ್ಗೆ ೧೦ ರಿಂದ ಸಂಜೆ ೫ ರವರೆಗೆ ಜನತಾ ದರ್ಶನ ನಡೆಸಿ ಜನರ ಸಮಸ್ಯೆ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.

ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬಳಿಕ ಶಾಲಾ ಶಿಕ್ಷಕರು ಮತ್ತು ಮಕ್ಕಳೊಂದಿಗೆ ಊಟ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published.