ಸಚಿವ ಸಂಪುಟದಿಂದ ದೂರ ಉಳಿದ ಘಟಾನುಘಟಿಗಳು !

ಸಚಿವ ಸಂಪುಟದಿಂದ ದೂರ  ಉಳಿದ ಘಟಾನುಘಟಿಗಳು !

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕೊನೆಗೂ ಒಂದು ಹಂತ ತಲುಪಿದ್ದು, ಅನೇಕ ಘಟಾನುಘಟಿ ನಾಯಕರು ಸಂಪುಟದಿಂದ ದೂರ ಉಳಿದಿರುವುದು ಇದೀಗ ವ್ಯಾಪಕ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್, ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ, ಮಾಜಿ ಸಚಿವ ರಮೇಶ ಜಾರಕಿಹೊಳಿ, ಎಂ.ಬಿ. ಪಾಟೀಲ, ಬಸವರಾಜ ಹೊರಟ್ಟಿ, ರಾಮಲಿಂಗಾರೆಡ್ಡಿ, ಎಚ್ ವಿಶ್ವನಾಥ, ಈಶ್ವರ ಖಂಡ್ರೆ, ಎಂ.ಸಿ. ಮನಗೂಳಿ, ರೋಷನ್ ಬೇಗ್, ಡಿ. ಸಿ. ತಮ್ಮಣ್ಣ, ಬಿ.ಎಂ. ಫಾರೂಕ್ ಸೇರಿದಂತೆ ಅನೇಕ […]

ಹೆಸರು ಕೈಬಿಟ್ಟಿದ್ದು ಏಕೆ ಎಂಬುದು ಗೊತ್ತಿಲ್ಲ: ಸತೀಶ ಜಾರಕಿಹೊಳಿ

ಹೆಸರು ಕೈಬಿಟ್ಟಿದ್ದು ಏಕೆ ಎಂಬುದು ಗೊತ್ತಿಲ್ಲ: ಸತೀಶ ಜಾರಕಿಹೊಳಿ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರದ ಸಚಿವ ಸಂಪುಟದ ಪಟ್ಟಿಯಲ್ಲಿ ತಮ್ಮ ಹೆಸರನ್ನು ಏಕೆ ಬಿಟ್ಟರೋ ಗೊತ್ತಿಲ್ಲ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸಂಪುಟ ವಿಸ್ತರಣೆ ನಂತರ ಈ ಸಂಬಂಧ ಹೈಕಮಾಂಡ್ ನೊಂದಿಗೆ ಮಾತುಕತೆ ನಡೆಸುವುದಾಗಿಯೂ ಅವರು ಮಾಧ್ಯಮಗಳಿಗೆ ತಿಳಿಸಿದರು. ಯಮಕನಮರಡಿ ಕ್ಷೇತ್ರದಿಂದ ಸತತ ಮೂರನೇ ಬಾರಿ ಆಯ್ಕೆಯಾಗಿರುವ ಸತೀಶ ಜಾರಕಿಹೊಳಿ ಅವರಿಗೆ ಈ ಬಾರಿ ಸಮಾಜ ಕಲ್ಯಾಣ  ಇಲಾಖೆಯ ಮಂತ್ರಿಯಾಗುವ ಅವಕಾಶ ಸಿಗುತ್ತದೆ ಎಂದು ಅವರ ಅಭಿಮಾನಿಗಳು ನಂಬಿದ್ದರು. ಆದರೆ, ಕೊನೆ ಗಳಿಗೆಯಲ್ಲಿ ನಡೆದ […]

ತಪ್ಪಿದ ಸಚಿವ ಸ್ಥಾನ: ಸತೀಶ ಜಾರಕಿಹೊಳಿ ಬೆಂಬಲಿಗರಿಂದ ಬೀದಿಗಿಳಿದು ಹೋರಾಟ

ತಪ್ಪಿದ ಸಚಿವ ಸ್ಥಾನ:  ಸತೀಶ ಜಾರಕಿಹೊಳಿ  ಬೆಂಬಲಿಗರಿಂದ ಬೀದಿಗಿಳಿದು ಹೋರಾಟ

ಬೆಂಗಳೂರು: ಯಮಕನಮರಡಿ ಶಾಸಕ ಹಾಗೂ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ತಪ್ಪಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರುವ ಬೆಂಬಲಿಗರು, ಅಭಿಮಾನಿಗಳು ವಿಧಾನಸೌಧದ ಮುಂದೆ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ. ವಿಧಾನಸೌಧದ ಹಿಂಭಾಗದಲ್ಲಿ ಬುಧವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ್ದ ಸತೀಶ ಜಾರಕಿಹೊಳಿ ಅಭಿಮಾನಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದೊಯ್ದಿದ್ದಾರೆ. ಇದೀಗ ವಿಧಾನಸೌಧದ ಮುಂಭಾಗದಲ್ಲಿ ಸೇರಿರುವ ಸಾವಿರಾರು ಬೆಂಬಲಿಗರು ಮಂತ್ರಿಗಿರಿಗೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದಾರೆ. Views: 1,594

ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ ಜಾರಕಿಹೊಳಿ ರಾಜೀನಾಮೆ ?

ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ ಜಾರಕಿಹೊಳಿ ರಾಜೀನಾಮೆ ?

ಬೆಳಗಾವಿ: ಕುಮಾರಸ್ವಾಮಿ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೇ? ಹೌದು, ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ಅವರ ಬೆಂಬಲಿಗರು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಬಿಡುವಂತೆ ಒತ್ತಡ ಹೇರತೊಡಗಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಬೆಂಬಲಿಗರು ಸಾಮಾಜಿಕ ನ್ಯಾಯದ ಮಾತನಾಡುವ ಮುಖಂಡರು, ರಾಜ್ಯಾದ್ಯಂತ ಪಕ್ಷ ಸಂಘಟಿಸಿ , ಉತ್ತಮ ಹೆಸರು ಉಳಿಸಿಕೊಂಡಿರುವ ಸತೀಶ ಜಾರಕಿಹೊಳಿ ಅವರಿಗೆ ಅನ್ಯಾಯ ಮಾಡಿದ್ದಾರೆ […]

ಬೆಳಗಾವಿ ಜಿಲ್ಲೆಗೆ ಮಿಸ್ ಆದ ಮಂತ್ರಿ ಸ್ಥಾನ !

ಬೆಳಗಾವಿ ಜಿಲ್ಲೆಗೆ ಮಿಸ್ ಆದ ಮಂತ್ರಿ ಸ್ಥಾನ !

ಬೆಳಗಾವಿ: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ ಕಸರತ್ತು ಅಂತೂ ಕೊನೆಗೊಂಡಿದ್ದು, ಬೆಂಗಳೂರಿನ ನಂತರ ಅತಿದೊಡ್ಡ ಜಿಲ್ಲೆ ಎನಿಸಿರುವ ಬೆಳಗಾವಿ ಜಿಲ್ಲೆಗೆ ಮಂತ್ರಿ ಸ್ಥಾನವೇ ಮಿಸ್  ಆಗಿರುವುದು ಶಾಕ್ ನೀಡಿದೆ. ಬೆಳಗಾವಿ ಜಿಲ್ಲೆಯಿಂದ ಈ ಬಾರಿ ಕಾಂಗ್ರೆಸ್ ಪಕ್ಷದಿಂದ  ಎಂಟು ಜನರು ಶಾಸಕರಾಗಿ ಆಯ್ಕೆಯಾಗಿದ್ದು, ಅವರಲ್ಲಿ ಮಂತ್ರಿಗಿರಿಗೆ ರಮೇಶ ಜಾರಕಿಹೊಳಿ, ಸತೀಶ ಜಾರಕಿಹೊಳಿ , ಲಕ್ಷ್ಮಿ ಹೆಬ್ಬಾಳಕರ ಮೂವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಲಕ್ಷ್ಮಿ ಹೆಬ್ಬಾಳಕರ ಅವರ […]

ಸತೀಶ ಜಾರಕಿಹೊಳಿಗೆ ತಪ್ಪಿದ ಸಚಿವ ಸ್ಥಾನ: ಬೆಂಬಲಿಗರ ದಿಢೀರ್ ಪ್ರತಿಭಟನೆ

ಸತೀಶ ಜಾರಕಿಹೊಳಿಗೆ ತಪ್ಪಿದ ಸಚಿವ ಸ್ಥಾನ: ಬೆಂಬಲಿಗರ ದಿಢೀರ್ ಪ್ರತಿಭಟನೆ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ  ಸಂಪುಟ ವಿಸ್ತರಣೆಯಲ್ಲಿ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಅವರ ಬೆಂಬಲಿಗರು ವಿಧಾನಸೌಧದ ಹಿಂಭಾಗದಲ್ಲಿ ಬುಧವಾರ ಮಿಂಚಿನ ಪ್ರತಿಭಟನೆ ನಡೆಸಿದರು. ಜನಪರ ಕಾಳಜಿ ಉಳ್ಳ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪಕ್ಷದ ಮುಖಂಡರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಭಟನಾಕಾರರು ಸಚಿವ ಸ್ಥಾನ ನೀಡದಿದ್ದತೆ ಪ್ರತಿಭಟನೆಯನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ […]

ಕಾಂಗ್ರೆಸ್ ಸಂಭಾವ್ಯ ಸಚಿವರ ಪಟ್ಟಿ ಫೈನಲ್ !

ಕಾಂಗ್ರೆಸ್ ಸಂಭಾವ್ಯ ಸಚಿವರ ಪಟ್ಟಿ ಫೈನಲ್ !

ಬೆಂಗಳೂರು: ಜೆಡಿಎಸ್ -ಕಾಂಗ್ರೆಸ್ ದೋಸ್ತಿ ಸರಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣ ಗಣನೆ ಆರಂಭಗೊಂಡಿದ್ದು, ಯಾರು ಮಂತ್ರಿಯಾಗುತ್ತಾರೆ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ. ಈ ಮಧ್ಯೆ 16 ಸಂಭಾವ್ಯ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಗಿದ್ದು, ಸಿಎಂ ಕುಮಾರಸ್ವಾಮಿಯವರಿಗೆ ರವಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಉಳಿದಂತೆ ಇತರ ವಿವರಗಳನ್ನು ಪ್ರಮಾಣ ವಚನ ಸ್ವೀಕಾರದ ನಂತರ ಬಹಿರಂಗಗೊಳಿಸಲಾಗುವುದು ಎಂದು  ಹೇಳುವ ಮೂಲಕ ಪರಮೇಶ್ವರ ಯಾವುದೇ ಗುಟ್ಟು ಬಿಟ್ಟುಕೊಡದಿರುವುದು ಇನ್ನಷ್ಟು ಕುತೂಹಲ ಕೆರಳಿಸಿದೆ. ಕೆಲವು […]

ಜೆಡಿಎಸ್ ಸಚಿವರ ಪಟ್ಟಿ ಫೈನಲ್: ಆಹ್ವಾನ ಬರುವುದೊಂದೇ ಬಾಕಿ !

ಜೆಡಿಎಸ್ ಸಚಿವರ ಪಟ್ಟಿ ಫೈನಲ್: ಆಹ್ವಾನ ಬರುವುದೊಂದೇ ಬಾಕಿ !

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲು ಇನ್ನು ಮೂರು ಗಂಟೆಗಳು ಮಾತ್ರ ಬಾಕಿ ಉಳಿದಿದ್ದು, ಎರಡೂ ಪಕ್ಷಗಳ ಸಚಿವರ ಅಂತಿಮ ಪಟ್ಟಿ ಇನ್ನೂ ಅಧಿಕೃತವಾಗಿ ಹೊರಬಿದ್ದಿಲ್ಲ. ಜೆಡಿಎಸ್ ನಿಂದ ಮಂತ್ರಿಗಳಾಗುವವರ ಹೆಸರುಗಳು ಬಹಿರಂಗಗೊಂಡಿದ್ದರೂ ರಾಜಭವನದಿಂದ ಯಾರಿಗೂ ಅಧಿಕೃತ ಆಹ್ವಾನ ಬಾರದಿರುವುದು ಬಹುತೇಕ ಶಾಸಕರನ್ನು ಆತಂಕದ ಮಡುವಿಗೆ ತಳ್ಳಿದೆ. ಎಚ್. ಡಿ. ರೇವಣ್ಣ, ಜಿ.ಟಿ. ದೇವೇಗೌಡ, ಸಾ. ರಾ. ಮಹೇಶ, ಪುಟ್ಟರಾಜು, ವೆಂಕಟರಾವ್ ನಾಡಗೌಡ, ಬಂಡೆಪ್ಪ ಕಾಶೆಂಪುರ, ಕುಮಾರಸ್ವಾಮಿ, ಮಹೇಶ  ಅವರ ಹೆಸರುಗಳು […]

ಪ್ರಮಾಣ ವಚನ 2 ರ ಬದಲು 2. 12 ಕ್ಕೆ !

ಪ್ರಮಾಣ ವಚನ 2 ರ ಬದಲು 2. 12 ಕ್ಕೆ !

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರದ ನೂತನ ಸಚಿವರು ನಾಳೆ ಮಧ್ಯಾಹ್ನ 2 ಗಂಟೆಗೆ ಬದಲು 2.12 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 2.12 ಕ್ಕೆ ಕನ್ಯಾ ಲಗ್ನದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ ಕಾಂಗ್ರೆಸ್ ಪಕ್ಷದಿಂದ ಯಾರು ಮಂತ್ರಿಯಾಗಲಿದ್ದಾರೆ ಎಂಬ ಕುರಿತು ರಾಹುಲ್ ಗಾಂಧಿಯವರು ರಾಜ್ಯ ಮುಖಂಡರೊಡನೆ ಚರ್ಚೆ ನಡೆಸುತ್ತಿದ್ದಾರೆ. ಕೆ.ಸಿ. ವೇಣುಗೋಪಾಲ, ಡಿಸಿಎಂ ಪರಮೇಶ್ವರ, ಮಾಜಿ ಸಿಎಂ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ, ಮಲ್ಲಿಕಾರ್ಜನ ಖರ್ಗೆ ಮತ್ತು ಇತರ ನಾಯಕರೊಡನೆ […]

ದೋಸ್ತಿ ಸರಕಾರ: 4 ಕ್ಕೆ ಫೈನಲ್ ಸರ್ಕಸ್ !

ದೋಸ್ತಿ ಸರಕಾರ: 4 ಕ್ಕೆ ಫೈನಲ್ ಸರ್ಕಸ್ !

ಹೊಸದಿಲ್ಲಿ: ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರ ರಚನೆಯ ಕಸರತ್ತು ಇನ್ನೂ ಮುಂದುವರಿದಿದ್ದು, ಇಂದು ಮಧ್ಯಾಹ್ನ 4 ಗಂಟೆಗೆ ರಾಹುಲಗಾಂಧಿ ನಿವಾಸದಲ್ಲಿ ಸಭೆ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ, ಡಿಸಿಎಂ ಪರಮೇಶ್ವರ, ಸಿಎಂ ಸಿದ್ಧರಾಮಯ್ಯ ಅವರಿಗೆ ಸಭೆಗೆ ಆಹ್ವಾನ ನೀಡಲಾಗಿದ್ದು, ಅಗತ್ಯವಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಆಹ್ವಾನಿಸುವ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ಜತೆಗೆ ಕೆಪಿಸಿಸಿ ಅಧ್ಯಕ್ಷ ಗಾದಿಯ ಕುರಿತಂತೆಯೂ ಸಭೆಯಲ್ಲಿ ಚರ್ಚೆ  ನಡೆಯುವ ಸಾಧ್ಯತೆಗಳಿವೆ. Views: 341