ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ “ಲಕ್ಷ್ಮೀ “ಯಾತ್ರೆ….

ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ “ಲಕ್ಷ್ಮೀ “ಯಾತ್ರೆ….

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ ವ್ಹಿ ಎಸ್ ಸಾಧುನವರ ಅವರ ಪರವಾಗಿ ಮತಯಾಚಿಸಿದರು,ವಿವಿವಿಧ ಗ್ರಾಮಗಳಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ನಡೆಸಿದ ಅವರು ಸಂಸದ ಸುರೇಶ ಅಂಗಡಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಸವದತ್ತಿ ತಾಲ್ಲೂಕಿನ ಹೂಲಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲಕ್ಷ್ಮೀ ಹೆಬ್ಬಾಳಕರ ನಡೆಸಿದ ಪಾದ ಯಾತ್ರೆ ಎಲ್ಲರ ಗಮನ ಸೆಳೆಯಿತು.ಸುಡು ಬಿಸಿಲಲ್ಲೂ ಮನೆ ಮನೆಗೆ ತೆರಳಿ ಮತಯಾಚಿಸಿದ ಹೆಬ್ಬಾಳಕರ ಬೆಳಗಾವಿ ಲೋಕಸಭಾ ಕ್ಷೇತ್ರದ […]

ಮೂಡಲಗಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರಿಂದ ಪಾದಯಾತ್ರೆ: ಸಾಧುನವರ ಪರ ಮತಯಾಚನೆ

ಮೂಡಲಗಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರಿಂದ ಪಾದಯಾತ್ರೆ: ಸಾಧುನವರ ಪರ ಮತಯಾಚನೆ

ಮೂಡಲಗಿ: ಅರಭಾಂವಿ ಮತ ಕ್ಷೇತ್ರದ ಮೂಡಲಗಿ ಪಟ್ಟಣದಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಭೆ ಸೋಮವಾರ ನಡೆಸಲಾಯಿತು. ನಂತರ ಪಟ್ಟಣದಲ್ಲಿ ಪಾದಯಾತ್ರೆ ಮೂಲಕ ಬೆಳಗಾವಿ ಲೋಕಸಭೆ ಮೈತ್ರಿ ಅಭ್ಯರ್ಥಿ ವ್ಹಿ.ಎಸ್. ಸಾಧುನವರ ಪರ ಮತಯಾಚಿಸಲಾಯಿತು. ಇದಕ್ಕೂ ಮುನ್ನ ಡಾ. ಬಾಬಾಸಾಹೇಬ ಅಂಬೇಡ್ಕರ್ 127 ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೈತ್ರಿ ಮುಖಂಡರಾದ ಪ್ರಕಾಶ ಬಾಗೇವಾಡಿ, ಎಸ್.ಆರ್.ಸೋನಾಲ್ಕರ್, ಸಣ್ಣಕ್ಕಿ ಸೇರಿದಂತೆ ನೂರಾರು ಇತರರು ಇದ್ದರು. Views: 285

ಮಾನವ ಬಂಧುತ್ವ ವೇದಿಕೆಯಿಂದ ಹಲಗಾದಲ್ಲಿ ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಮಾನವ ಬಂಧುತ್ವ ವೇದಿಕೆಯಿಂದ  ಹಲಗಾದಲ್ಲಿ ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್  ಜಯಂತಿ ಆಚರಣೆ

ಡಾ‌. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಅರ್ಪಿಸಿದ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಬೆಳಗಾವಿ: ಮಾನವ ಬಂಧುತ್ವ ವೇದಿಕೆ ವತಿಯಿಂದ ಜಿಲ್ಲೆಯ ಹಲಗಾ ಗ್ರಾಮದಲ್ಲಿ ಡಾ.‌ಬಾಬಾಸಾಹೇಬ್ ಅಂಬೇಡ್ಕರ್ ಅವರ 128 ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ್ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿದರು. ಪ್ರಕಾಶ ಬೊಮ್ಮನ್ನವರ, ಚಿದಾನಂದ ಬೆಟಸೂರು, ಚೈತನ ಕುರಂಗಿ, ಪ್ರಶಾಂತ ಕುರಂಗಿ, ಫಿರಾಜೀ ಕೋರೆ ಇತರರು […]

ಮಾನವ ಬಂಧುತ್ವ ವೇದಿಕೆಯಿಂದ ಅರಟಾಳದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ 128ನೇಜಯಂತಿ ಆಚರಣೆ

ಮಾನವ ಬಂಧುತ್ವ ವೇದಿಕೆಯಿಂದ ಅರಟಾಳದಲ್ಲಿ  ಡಾ.ಬಿ.ಆರ್ ಅಂಬೇಡ್ಕರ್ 128ನೇಜಯಂತಿ ಆಚರಣೆ

ಅಥಣಿ: ಅರಟಾಳ ಗ್ರಾಮದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ 128ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಗ್ರಾಪಂ ಕಾರ್ಯದರ್ಶಿ ಗಡಾದೆ, ಗ್ರಾಪಂ ಕ್ಲರ್ಕ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು. ಮಾನವ ಹಕ್ಕುಗಳ ಹೋರಾಟಗಾರರಾದ ಡಾ.ಗೌತಮ ಬನಸೋಡೆ ಮಾತನಾಡಿ, ಡಾ.ಬಾಬಾಸಾಹೇಬ ಅಂಬೇಡ್ಕರ ರವರ ಕೊಡುಗೆ ಅಪಾರ. ಜನರು ಮೂಢನಂಬಿಕೆಯಿಂದ ಹೊರಬಂದು ವೈಚಾರಿಕತೆಯಡೆ ಸಾಗಬೇಕು ಎಂದು ಹೇಳಿದರು. ಆನಂದ , ಹಣಮಂತ ಪಾಟೀಲ, ಯಶೋಧರ ಕಾಂಬಳೆ, ಸಾಗರ ಕಾಂಬಳೆ, ಮಲ್ಲಿಕಾರ್ಜುನ […]

ಡಾ.ಬಾಬಾಸಾಹೇಬ್ ಅಂಬೇಡ್ಕರ್ 128 ನೇ ಜಯಂತಿ ಅದ್ದೂರಿಯಾಗಿ ಆಚರಣೆ

ಡಾ.ಬಾಬಾಸಾಹೇಬ್ ಅಂಬೇಡ್ಕರ್ 128 ನೇ ಜಯಂತಿ ಅದ್ದೂರಿಯಾಗಿ ಆಚರಣೆ

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 128 ನೇ ಡಾ. ಬಾಬಾಸಾಹೇಬ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿನ ಬಾಬಾಸಾಹೇಬರ ಪ್ರತಿಮೆಗೆ ಸಂಸದ ಸುರೇಶ ಅಂಗಡಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಅನಿಲ್ ಬೆನಕೆ, ಹಿಂದಿನ ಪ್ರಾದೇಶಿಕ ಆಯುಕ್ತರಾದ ಮೇಘಣ್ಣವರ, ಪ್ರಾದೇಶಿಕ ಆಯುಕ್ತರಾದ ತುಷಾರ ಗಿರಿನಾಥ್, ಜಿಲ್ಲಾಧಿಕಾರಿ ಆರ್. ವಿಶಾಲ್, ಐಜಿಪಿ ರಾಘವೇಂದ್ರ ಸುಹಾಸ, ಎಸ್.ಪಿ ಸುಧೀರಕುಮಾರ್ ರೆಡ್ಡಿ, ಅಪರ ಜಿಲ್ಲಾಧಿಕಾರಿ .ಎಚ್.ಬಿ.ಬೂದೇಪ್ಪ, ಪಾಲಿಕೆ ಆಯುಕ್ತ ಇಬ್ರಾಹಿಂ ಮೈಗೂರ, ಮಾಜಿ ಶಾಸಕ ಪಿರೋಜ್ […]

ಸಿಎಂ ಕುಮಾರಸ್ವಾಮಿ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದ ಬಿಎಸ್ ವೈ

ಸಿಎಂ ಕುಮಾರಸ್ವಾಮಿ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದ ಬಿಎಸ್ ವೈ

ಬೈಲಹೊಂಗಲ: ಸಿಎಂ ಕುಮಾರಸ್ವಾಮಿ ಇತ್ತಿಚೀನ ದಿನದಲ್ಲಿ ತಲೆ ಕೆಟ್ಟು ಏನೇನೊ ಮಾತನಾಡುತ್ತಿದ್ದಾರೆ. ಎರಡು ಹೊತ್ತು ಊಟಕ್ಕೆ ಗತಿ ಇಲ್ಲದವರು ಸೈನ್ಯಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾತುಗಳನ್ನಾಡಿ ಸೈನಿಕರನ್ನು ಅವಮಾನ ಮಾಡಿದ್ದಾರೆ ಕುಮಾರಸ್ವಾಮಿಯವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲದಂತಾಗಿದೆ ಎಂದು ಬಿಎಸ್ ವೈ ವಾಗ್ದಾಳಿ ನಡೆಸಿದರು. ಶನಿವಾರ ಪಟ್ಟಣದ ಎಂಕೆಸಿಆರ್ ಹೈಸ್ಕೂಲ್ ಮೈದಾನದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ವಿಶ್ವದ ಅಗ್ರಗಣ್ಯರ ರಾಷ್ಟ್ರಗಳು ಪ್ರಧಾನಿ ಮೋದಿಯವರ ಆಡಳಿತ ವೈಖರಿಯನ್ನು ಮೆಚ್ಚಿ ಗೌರವಿಸುತ್ತಿದ್ದರೆ, ಇತ್ತ ಕಾಂಗ್ರೆಸ್‍ನವರು ಅವರ ಕುರಿತು ಹಗುರವಾಗಿ ಮಾತನಾಡುತ್ತಿರುವುದು […]

ಬೆಳಗಾವಿಗೆ ಸುರೇಶ ಅಂಗಡಿ ಕೊಡುಗೆ ಶೂನ್ಯ: ಸಾಧುನವರ್

ಬೆಳಗಾವಿಗೆ ಸುರೇಶ ಅಂಗಡಿ ಕೊಡುಗೆ ಶೂನ್ಯ: ಸಾಧುನವರ್

ಬೆಳಗಾವಿ: ಕಳೆದ 15 ವರ್ಷದಲ್ಲಿ ಸಂಸದ ಸುರೇಶ ಅಂಗಡಿ ಕೊಡುಗೆ ಶೂನ್ಯ ಎಂದು ಕಾಂಗ್ರೆಸ್ ಅಭ್ಯರ್ಥಿ ಸಾಧುನವರ್ ಆಪಾದಿಸಿದರು. ಸವದತ್ತಿ ಪಟ್ಟಣದಲ್ಲಿ ಭರ್ಜರಿ ಮತಯಾಚನೆ ನಡೆಸಿದ ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಅಭಿವೃದ್ದಿಗೆ ಕಾಂಗ್ರೆಸ್ ಹಲವು ಕೊಡುಗೆ ನೀಡಿದೆ. ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಗೆ, ಹೈಟೆಕ್ ಬಸ್ ನಿಲ್ದಾಣ ಸೇರಿ ವಿವಿಧ ಕಾಮಗಾರಿಗಳನ್ನು ಸಿದ್ದರಾಮಯ್ಯ ಕೊಡುಗೆ ನೀಡಿದ್ದಾರೆ. ಸಂಸದ ಸುರೇಶ ಅಂಗಡಿ ಮೂರು ಬಾರಿ ಕಾಲ ಹರಣ ಮಾಡಿದ್ದಾರೆ ಎಂದು ದೂರಿದರು. ಸವದತ್ತಿ ಯಲ್ಲಮ್ಮ ದೇವಸ್ಥಾನ ಟ್ರಸ್ಟ […]

ಕುಂದಾನಗರಿಯಲ್ಲಿ ಆಲಿಕಲ್ಲು ಮಳೆ

ಕುಂದಾನಗರಿಯಲ್ಲಿ ಆಲಿಕಲ್ಲು  ಮಳೆ

ಬೆಳಗಾವಿ: ಬಿಸಿಲಿನಿಂದ ಬಸವಳಿದಿದ್ದ ಬೆಳಗಾವಿ ಜನತೆಗೆ ಶನಿವಾರ ಒಂದು ಗಂಟೆಗೂ ಹೆಚ್ಚು ಕಾಲ ಆಲಿಕಲ್ಲ ಸಹಿತ ಮಳೆ ಸುರಿದು ತಂಪೆರಗಿತು. ಬೆಳಗ್ಗೆಯಿಂದಲೇ ಹೆಚ್ಚಾಗಿದ್ದ ಬಿಸಿಲಿನ ತಾಪ ಮಧ್ಯಾಹ್ನ ಮೋಡದ ರೂಪದಲ್ಲಿ ಪರಿವರ್ತನೆಯಾಯಿತು. 4. 30 ರ ಸುಮಾರಿಗೆ ಆಲಿಕಲ್ಲು ಸಮೇತ ಒಂದು ಗಂಟೆಗೂ ಹೆಚ್ಚು ಹೊತ್ತು ಮಳೆ ತಂಪೆರೆಯಿತು. Views: 142

ಸಾಲ ಮನ್ನಾ ಮಾಡೋದಾಗಿ ಹೇಳಿ ದೋಸ್ತಿ ಸರಕಾರ ರೈತರಿಗೆ ಟೋಪಿ ಹಾಕಿದೆ: ಸುರೇಶ ಅಂಗಡಿ

ಸಾಲ ಮನ್ನಾ ಮಾಡೋದಾಗಿ ಹೇಳಿ ದೋಸ್ತಿ ಸರಕಾರ ರೈತರಿಗೆ ಟೋಪಿ ಹಾಕಿದೆ: ಸುರೇಶ ಅಂಗಡಿ

ಗೋಕಾಕ: ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಮತ್ತೆ ಅವಕಾಶ ಮಾಡಿಕೊಡುವಂತೆ ಸಂಸದ, ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಮತದಾರರಲ್ಲಿ ಮನವಿ ಮಾಡಿದರು. ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ 130 ಕೋಟಿ ಜನರಿಗೆ ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದೆ. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೇಸ್ ಸರ್ಕಾರ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳುತ್ತ ರೈತರಿಗೆ ಟೋಪಿ ಹಾಕಿದೆ ಎಂದು ಆರೋಪಿಸಿದರು. ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಬಿಜೆಪಿಗೂ ಮುನ್ನ […]

ಸುರೇಶ ಅಂಗಡಿ 2 ಲಕ್ಷಕ್ಕೂ ಅಧಿಕ ಮತದಿಂದ ಜಯಗಳಿಸುತ್ತಾರೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಸುರೇಶ ಅಂಗಡಿ 2 ಲಕ್ಷಕ್ಕೂ ಅಧಿಕ ಮತದಿಂದ ಜಯಗಳಿಸುತ್ತಾರೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಗೋಕಾಕ ಹಾಗೂ ಅರಭಾವಿ ಮತಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ‘ಲೀಡ್’ ನೀಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು. ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಲೋಕಸಭಾ ಚುನಾವಣೆ ನಿಮಿತ್ಯ ಗೋಕಾಕ ಹಾಗೂ ಅರಭಾವಿ ಮತಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಯನ್ನುದ್ಧೇಶಿಸಿ ಮಾತನಾಡಿದ ಅವರು, ಏ. 23 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಗೋಕಾಕ ಕ್ಷೇತ್ರಕ್ಕೆ ಈ ಬಾರಿ ವಿಶೇಷವಾಗಲಿದೆ. ಬಿಜೆಪಿಗೆ ಹೆಚ್ಚಿನ ಪ್ರಮಾಣದಲ್ಲಿ ಮತಗಳು ಪ್ರಾಪ್ತಿಯಾಗಿ ಸುರೇಶ ಅಂಗಡಿ ಅವರು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಶಾಲಿಯಾಗಲಿದ್ದಾರೆ. […]