ಸಿಎಂ ಕುಮಾರಸ್ವಾಮಿ ಕ್ಲರ್ಕ್ ಎಂದು ಟೀಕಿಸಿದ ಪ್ರಧಾನಿ ಮೋದಿ

ಸಿಎಂ ಕುಮಾರಸ್ವಾಮಿ ಕ್ಲರ್ಕ್ ಎಂದು ಟೀಕಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಸಿಎಂ ಕುಮಾರಸ್ವಾಮಿ ಕ್ಲರ್ಕ್ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.  ಇಲ್ಲಿನ ರಾಮಲೀಲಾ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಮಾರೋಪದಲ್ಲಿ ಮಾತನಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ದೋಸ್ತಿ ಮಾಡಿಕೊಂಡಿರುವ ಜೆಡಿಎಸ್​ ಮುಖ್ಯಮಂತ್ರಿಯನ್ನು ಕ್ಲರ್ಕ್​ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಎಂದರು. ಕರ್ನಾಟಕದಲ್ಲಿ ದೋಸ್ತಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಕಾಂಗ್ರೆಸ್ ಈಗಾಗಲೇ ಮುಖ್ಯಮಂತ್ರಿಯನ್ನು ಕ್ಲರ್ಕ್ ನಂತೆ ನೋಡುತ್ತಿದ್ದಾರೆ ಎಂದು ಟೀಕಿಸಿದರು.  udayanadu2016