ಕಾಮನವೆಲ್ತ್ ನಲ್ಲಿ ದೇಶಕ್ಕೆ ಮೊದಲ ಪದಕ: ಕನ್ನಡಿಗನಿಗೆ ಅಭಿನಂದಿಸಿದ ಸೆಹ್ವಾಗ್

ಕಾಮನವೆಲ್ತ್ ನಲ್ಲಿ ದೇಶಕ್ಕೆ ಮೊದಲ ಪದಕ: ಕನ್ನಡಿಗನಿಗೆ ಅಭಿನಂದಿಸಿದ ಸೆಹ್ವಾಗ್

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನವೆಲ್ತ್ ಕ್ರೀಡಾಕೂಟದಲ್ಲಿ ಕನ್ನಡಿಗನ ಶ್ರಮದಿಂದ ಭಾರತಕ್ಕೆ ಮೊದಲ ಪದಕ ಲಭಿಸಿದೆ. ಆಸ್ಟ್ರೇಲಿಯಾದ ಗೋಲ್ಡ್‌ಕೋಸ್ಟ್‌ನಲ್ಲಿ ನಡೆಯುತ್ತಿರುವ 21ನೇ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಉಡುಪಿಯ ಗುರುರಾಜ್‌ ವೇಟ್‌ ಲಿಫ್ಟಿಂಗ್‌‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ. ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಪದಕ ಗೆದ್ದ ಗುರುರಾಜ್‌ಗೆ ಟ್ವೀಟರ್ ನಲ್ಲಿ ಅಭಿನಂದನೆ ತಿಳಿಸಿದ್ದಾರೆ.  56 ಕೆಜಿ ವಿಭಾಗದ ವೇಟ್‌ ಲಿಫ್ಟಿಂಗ್‌‌ನಲ್ಲಿ 249 ಕೆ.ಜಿ ತೂಕ ಎತ್ತುವ ಮೂಲಕ ಗುರುರಾಜ್‌ ಮೊದಲ ದಿನವೇ ಪದಕಕ್ಕೆ ಮುತ್ತಿಕ್ಕಿದ್ದು, ಭಾರತ ಪದಕದ ಖಾತೆ ತೆಗೆದಿದೆ. […]

ಕರ್ನಾಟಕ ಬಂದ್ ಹಿಂದೆ ರಾಜ್ಯ ಸರ್ಕಾರದ ಹಸ್ತಕ್ಷೇಪ ಇಲ್ಲ: ಗೃಹ ಸಚಿವ ರಾಮಲಿಂಗಾರೆಡ್ಡಿ

ಕರ್ನಾಟಕ ಬಂದ್ ಹಿಂದೆ ರಾಜ್ಯ ಸರ್ಕಾರದ  ಹಸ್ತಕ್ಷೇಪ ಇಲ್ಲ: ಗೃಹ ಸಚಿವ ರಾಮಲಿಂಗಾರೆಡ್ಡಿ

ಮಂಗಳೂರು: ಕರ್ನಾಟಕ ಬಂದ್ ಹಿಂದೆ ರಾಜ್ಯ ಸರ್ಕಾರದ  ಹಸ್ತಕ್ಷೇಪ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರೇ ದಿನ ನಿಗದಿಪಡಿಸಿಕೊಂಡು ಬಂದ್‌ಗೆ ಕರೆ ನೀಡಿದ್ದಾರೆ. ಬಂದ್ ಮಾಡಿದರೆ ರಾಜ್ಯ ಸರ್ಕಾರಕ್ಕೆ ಯಾವ ಲಾಭ ಇಲ್ಲವೆಂದು ಸ್ಪಷ್ಟಪಡಿಸಿದರು. ದೇಶದಲ್ಲಿಯೇ ಕಾಂಗ್ರೆಸ್ ಸರ್ಕಾರ ಅಪರಾಧಗಳಲ್ಲಿ 2ನೇ ಸ್ಥಾನದಲ್ಲಿದೆ ಎಂಬ ಕೇಂದ್ರ ಸಚಿವ ಪ್ರಕಾಶ ಜಾವಡೇಕರ್ ಹೇಳಿಕೆಗೆ ತಿರುಗೇಟು ನೀಡಿದ ಗೃಹ ಸಚಿವರು, ದೇಶದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೇ ಅಪರಾಧ ಪ್ರಕರಣಗಳು ಹೆಚ್ಚಿವೆ. ಕರ್ನಾಟಕದ […]

ವೈದ್ಯಕೀಯ ಶಿಕ್ಷಣ ಶುಲ್ಕ ಏರಿಕೆ ಖಂಡಿಸಿ ಎಬಿವಿಪಿ ಪದಾಧಿಕಾರಿಗಳಿಂದ ಪ್ರತಿಭಟನೆ

ವೈದ್ಯಕೀಯ ಶಿಕ್ಷಣ ಶುಲ್ಕ ಏರಿಕೆ ಖಂಡಿಸಿ ಎಬಿವಿಪಿ ಪದಾಧಿಕಾರಿಗಳಿಂದ ಪ್ರತಿಭಟನೆ

ದಾವಣಗೆರೆ: ವೈದ್ಯಕೀಯ ಶಿಕ್ಷಣದ ಶುಲ್ಕ ಏರಿಕೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ನಗರದ ಜಯದೇವ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ವರ್ಷದಿಂದ ವರ್ಷಕ್ಕೆ ವೃತ್ತಿಪರ ಕೋರ್ಸ್‍ಗಳ ಶುಲ್ಕ ಏರಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ವೃತ್ತಿಪರ ಕೋರ್ಸ್‍ಗಳ ಶುಲ್ಕ ಏರಿಕೆಯಾಗುತ್ತಿದ್ದು, ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ನುಂಗಲಾರದ ತುತ್ತಾಗಿದೆ. ಪ್ರಸಕ್ತ ಸಾಲಿನಲ್ಲಿ ಶೇ. 10ರಷ್ಟು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳ ಶುಲ್ಕ ಹೆಚ್ಚಿಸಿರುವ […]