ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನಾಳೆ ಎಚ್.ಕೆ. ಪಾಟೀಲ ಅಧಿಕಾರ ಸ್ವೀಕಾರ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಣಿಯಾಗುತ್ತಿದ್ದು, ಇದರ ಮೊದಲ ಭಾಗವಾಗಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪಕ್ಷದ ಹಿರಿಯ ಮುಖಂಡ ಎಚ್.ಕೆ. ಪಾಟೀಲ ನಾಳೆ ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಹೊಸದಾಗಿ ರಚಿಸಲಾಗಿರುವ ಪ್ರಚಾರ ಸಮಿತಿ ಇತರ ಪದಾಧಿಕಾರಿಗಳೂ ನಾಳೆಯಿಂದಲೇ ಕಾರ್ಯೋನ್ಮುಖಲಾಗಲಿದ್ದಾರೆ ಎಂದು ಪಕ್ಷದ ಮುಖಂಡ ಬಿ.ಎಲ್. ಶಂಕರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅರಮನೆ ಮೈದಾನದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜವಾಬ್ದಾರಿ ವಹಿಸಿಕೊಂಡ ನಂತರ ಅಧಿಕೃತ ಪ್ರಚಾರ ಕಾರ್ಯಕ್ರಮಗಳಿಗೆ ಚಾಲನೆ ದೊರಕಲಿದೆ. ಉತ್ತಮ […]